ಅಯೋಧ್ಯೆಯಲ್ಲಿ ರಾಮ ಮಂದಿರದ ಬಳಿ ವಾಲ್ಮೀಕಿ ಮಂದಿರ ನಿರ್ಮಾಣಕ್ಕೆ ಸಚಿವ ಸತೀಶ್ ಜಾರಕಿಹೊಳಿ ಒತ್ತಾಯ

ಅಯೋಧ್ಯೆಯ ರಾಮ ಮಂದಿರದ ಬಳಿ ವಾಲ್ಮೀಕಿ ಮಂದಿರವನ್ನೂ ನಿರ್ಮಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದ ಬಳಿ ವಾಲ್ಮೀಕಿ ಮಂದಿರವನ್ನೂ ನಿರ್ಮಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.

ವಾಲ್ಮೀಕಿ ರಾಮಾಯಣ ರಚಿಸಿದ್ದಾರೆ. ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ನಾಮಕರಣ ಮಾಡಿರುವುದು ಸ್ವಾಗತಾರ್ಹ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿರುವುದು ನಮಗೆಲ್ಲಾ ಸಂತಸ ತಂದಿದೆ. ಇದು ಭಾರತೀಯರ ದೀರ್ಘಾವಧಿಯ ಕನಸಾಗಿತ್ತು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣದಿಂದ ಬಿಜೆಪಿಗೆ ರಾಜಕೀಯವಾಗಿ ಲಾಭವಾಗಲಿದೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಸಚಿವರು, ದೇಶದಲ್ಲಿ ಹಲವು ದೇವಾಲಯಗಳಿವೆ, ಅವುಗಳಲ್ಲಿ ರಾಮಮಂದಿರವೂ ಒಂದು, ರಾಜಕಾರಣ ಎಲ್ಲೆಡೆಯೂ ಇದೆ, ಬಿಜೆಪಿಗೆ ಇದರಿಂದ ಲಾಭವಾಗಲಿದೆಯೇ? ಎಂಬುದು ಚುನಾವಣೆ ಬಳಿಕ ತಿಳಿಯಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಹಿಜಾಬ್ ವಿಚಾರ ಮುನ್ನೆಲೆಗೆ ಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಹಿಜಾಬ್ ಬಗ್ಗೆ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಸಮರ್ಥಿಸಿಕೊಂಡರು. "ಹೇಳಿಕೆಯನ್ನು ನೀಡಿರಬಹುದು, ಆದರೆ ಯಾವುದೇ ಕಾನೂನು ಇಲ್ಲ. ಹಿಜಾಬ್ ಧರಿಸುವುದು ವ್ಯಕ್ತಿಗಳಿಗೆ ಬಿಟ್ಟದ್ದು. ಆದರೆ, ಅದು ಯಾವಾಗಲೂ ಹಾಗೆ ಇದೆ; ಅದು ಮುಂದುವರಿಯಲಿ" ಎಂದು ಹೇಳಿದ್ದಾರೆ.

ಕರ್ನಾಟಕದ ಮೂವರು ಉಪಮುಖ್ಯಮಂತ್ರಿಗಳ ಬೇಡಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಹೇಳಿದ್ದಾರೆ. 

ಮುಸ್ಲಿಂ ಮಹಿಳೆಯರಿಗೆ  ಪ್ರಧಾನಿ ಮೋದಿ ಬಂದ ನಂತರವೇ ಖಾಯಂ ಪತಿಗಳು ಸಿಕ್ಕಿದ್ದು ಎಂಬ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ ನೀಡಿರುವ ಕುರಿತು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ಆದೇಶಕ್ಕೆ ಕಾಯಬೇಕಿದೆ. . 'ನ್ಯಾಯಾಲಯದ ತೀರ್ಮಾನವೇ ಅಂತಿಮ; ನಾವು ಏನನ್ನೂ ಹೇಳಲು ಸಾಧ್ಯವಿಲ್ಲ, 'ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com