ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪ್ರಧಾನಿ ಮೋದಿಯವರ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ

ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಅನ್ನು ಇಂದು ಬುಧವಾರ ಮೈಸೂರಿನ ಪಕ್ಷದ ಕಚೇರಿಯಲ್ಲಿ ಪ್ರದರ್ಶಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಕಾಂಗ್ರೆಸ್
ಕಾಂಗ್ರೆಸ್

ಮೈಸೂರು: ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಅನ್ನು ಇಂದು ಬುಧವಾರ ಮೈಸೂರಿನ ಪಕ್ಷದ ಕಚೇರಿಯಲ್ಲಿ ಪ್ರದರ್ಶಿಸಲು ಕಾಂಗ್ರೆಸ್ ನಿರ್ಧರಿಸಿದೆ. ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರ ಎಂ.ಲಕ್ಷ್ಮಣ, ಸಾಕ್ಷ್ಯಚಿತ್ರ ಪ್ರದರ್ಶನ ವೇಳೆ ಧೈರ್ಯವಿದ್ದರೆ ತಮ್ಮನ್ನು ಬಂಧಿಸಿ ಎಂದು ಪೊಲೀಸರಿಗೆ ಸವಾಲು ಹಾಕಿದರು. 

“ಪೊಲೀಸರು ನನ್ನನ್ನು ಬಂಧಿಸಲಿ ಮತ್ತು ಪ್ರಸಾರವಾಗುವುದನ್ನು ನಿಲ್ಲಿಸಲಿ ನೋಡೋಣ, ಪ್ರಧಾನಿ ಮೋದಿಯವರ ನಿಜವಾದ ಮುಖ ಮತ್ತು 2002 ರ ಗುಜರಾತ್ ಗಲಭೆಯಲ್ಲಿ ಅವರ ಪಾತ್ರವನ್ನು ಜನರು ತಿಳಿದುಕೊಳ್ಳಬೇಕೆಂದು ನಾವು ಬಯಸುತ್ತೇವೆ ಎಂದು ಹೇಳಿದರು. 

ಮೋದಿಯನ್ನು ಪ್ರಚಾರ ಮಾಡಲು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮಾಡಲಾಯಿತು ಎಂದು ಟೀಕಿಸಿದ ಲಕ್ಷ್ಮಣ, ಬಿಜೆಪಿ ಸರ್ಕಾರವು ತನ್ನ ಸದಸ್ಯರಿಗೆ ಅದನ್ನು ತೋರಿಸಲು ಅಧಿವೇಶನವನ್ನು ಸ್ಥಗಿತಗೊಳಿತ್ತು. “ಪ್ರಧಾನಿಯನ್ನು ಹೊಗಳಿದ ನಟರು ಮತ್ತು ಅವರನ್ನು ಖುಷಿಪಡಿಸುವವರು ಮಾತ್ರ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದಲ್ಲಿ ನಟಿಸಿದ್ದಾರೆ. ಆದರೆ ಬ್ರಿಟಿಷ್ ಸರ್ಕಾರದ ಘಟಕವಾಗಿದ್ದರೂ, ಸರ್ಕಾರದ ಯಾವುದೇ ಒತ್ತಡಕ್ಕೆ ಮಣಿಯದೆ BBC ಸಾಕ್ಷ್ಯಚಿತ್ರ ಸರಣಿಯನ್ನು ಸಿದ್ಧಪಡಿಸಿದೆ ಎಂದರು. 

ನಮ್ಮ ದೂರದರ್ಶನವು ಮೋದಿಯನ್ನು ಹೊಗಳುವುದನ್ನು ಬಿಟ್ಟು ಇಂತಹ ಸಾಕ್ಷ್ಯಚಿತ್ರಗಳನ್ನು ಮಾಡಿ ಜನರಿಗೆ ಸತ್ಯವನ್ನು ತಿಳಿಸಬೇಕೆಂದು ನಾವು ಬಯಸುತ್ತೇವೆ,” ಎಂದು ಅವರು ಹೇಳಿದರು. ಇದೇ ವೇಳೆ ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಮಾತನಾಡಿ, ಸಾಕ್ಷ್ಯಚಿತ್ರ ಪ್ರದರ್ಶನದಲ್ಲಿ ತೊಡಗಿರುವವರ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಲಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com