48 ಲಕ್ಷ ರೂ. ವಿದ್ಯುತ್ ಬಿಲ್ ಬಾಕಿ: ಪವರ್ ಕಟ್ ಮಾಡುವುದಾಗಿ ಕೆಸಿ ಜನರಲ್ ಆಸ್ಪತ್ರೆಗೆ ನೋಟಿಸ್ ನೀಡಿದ ಬೆಸ್ಕಾಂ!

ರೂ.48 ಲಕ್ಷ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಸ್ವಾಮ್ಯದ ಕೆಸಿ ಜನರಲ್ ಆಸ್ಪತ್ರೆಗೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (ಬೆಸ್ಕಾಂ) ನೋಟಿಸ್ ಜಾರಿ ಮಾಡಿದ್ದು, ಬಿಲ್ ಗಳ ತೆರವುಗೊಳಿಸದಿದ್ದರೆ, ಪವರ್ ಕಟ್ ಮಾಡುವುದಾಗಿ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರೂ.48 ಲಕ್ಷ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಸ್ವಾಮ್ಯದ ಕೆಸಿ ಜನರಲ್ ಆಸ್ಪತ್ರೆಗೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (ಬೆಸ್ಕಾಂ) ನೋಟಿಸ್ ಜಾರಿ ಮಾಡಿದ್ದು, ಬಿಲ್ ಗಳ ತೆರವುಗೊಳಿಸದಿದ್ದರೆ, ಪವರ್ ಕಟ್ ಮಾಡುವುದಾಗಿ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ.

ಬೆಸ್ಕಾಂನ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಮಾಸಿಕ ಆಧಾರದ ಮೇಲೆ ಆಸ್ಪತ್ರೆ ಬಿಲ್‌ಗಳನ್ನು ತೆರವುಗೊಳಿಸಿಲ್ಲ. ಲಕ್ಷಗಟ್ಟಲೆ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ನಾವು ನೋಟಿಸ್ ಜಾರಿ ಮಾಡುವಂತಾಯಿತು. ಎರಡು ತಿಂಗಳ ಹಿಂದೆಯೇ ಆಸ್ಪತ್ರೆಗೆ ಮೊದಲ ನೋಟೀಸ್ ಜಾರಿ ಮಾಡಲಾಗಿತ್ತು, ಜ.17ರಂದು ಮತ್ತೊಮ್ಮೆ ನೋಟಿಸ್ ನೀಡಲಾಯಿತು. ಜ.30ರಂದು ಬೆಸ್ಕಾಂ ಸಿಬ್ಬಂದಿ ಬಿಲ್ ಗಳನ್ನು ಕ್ಲಿಯರ್ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಹೇಳಿದ್ದಾರೆ.

ಆಸ್ಪತ್ರೆಯಾಗಿರುವುದರಿಂದ ಪವರ್ ಕಟ್ ಮಾಡಿದರೆ ರೋಗಿಗಳ ಪರಿಣಾಮ ಬೀರಲಿದೆ. ಹೀಗಾಗಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲು ಮುಂದಾಗಿಲ್ಲ. ಬಿಬಿಎಂಪಿ ಮತ್ತು ಬಿಡಬ್ಲ್ಯೂಎಸ್‌ಎಸ್‌ಬಿ ವಿಚಾರದಲ್ಲೂ ಹೀಗೆಯೇ ಆಗಿದೆ. ನೀರಿನ ಬಿಲ್‌ಗಳ ತೆರವುಗೊಳಿಸಲಾಗಿಲ್ಲ. ಖಾಸಗಿ ಆಸ್ಪತ್ರೆಗಳು ಸಮಯಕ್ಕೆ ಸರಿಯಾಗಿ ಬಿಲ್‌ಗಳನ್ನು ತೆರವುಗೊಳಿಸಿದರೆ, ಸರ್ಕಾರಿ ಸಂಸ್ಥೆಗಳು ಪಾವತಿಗಳನ್ನು ವಿಳಂಬಗೊಳಿಸುತ್ತಿವೆ ಎಂದು ಬೆಸ್ಕಾಂ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಸ್ಪತ್ರೆಯ ಮಾಸಿಕ ಬಿಲ್ ತಿಂಗಳಿಗೆ ಸರಾಸರಿ ರೂ.7-8 ಲಕ್ಷ ಬರಲಿದೆ. ಸಕಾಲದಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಹಣ ಬಿಡುಗಡೆಯಾಗುತ್ತಿಲ್ಲ ಎಂದು ಹೆಸರು ಹೇಳಲಿಚ್ಛಿಸದ ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೀರು ಮತ್ತು ವಿದ್ಯುತ್ ಬಿಲ್‌ಗಳ ಮೊತ್ತವನ್ನು ಮಾಸಿಕ ನಿರ್ವಹಣೆ ಮೊತ್ತದ ಅಡಿಯಲ್ಲಿ ನಿಗದಿತ ದಿನಾಂಕಗಳಲ್ಲಿ ಪೂರ್ವನಿಯೋಜಿತವಾಗಿ ಬಿಡುಗಡೆ ಮಾಡಬೇಕು. ಆದರೆ, ಪ್ರತಿ ಬಿಲ್ ಕ್ಲಿಯರೆನ್ಸ್‌ಗೆ ನಾವು ಇಲಾಖೆಯ ಅನುಮೋದನೆಯನ್ನು ಪಡೆಯುವುದು ಅನಿವಾರ್ಯವಾಗಿದೆ. ಇಲಾಖೆಯಿಂದ ಸಣ್ಣ ಮೊತ್ತದ ಹಣ ಬಿಡುಗಡೆಯಾಗಿರುವುದರಿಂದ, ನಾವು ಮಾಸಿಕ ಬಿಲ್‌ಗಳನ್ನು ಭಾಗಶಃ ಪಾವತಿಸಲು ಮಾತ್ರ ಸಾಧ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com