ಬಡವರು ನಿವೇಶನ ಖರೀದಿಸಲು ನಿಯಮಗಳ ಸರಳಗೊಳಿಸಲಾಗುತ್ತದೆ: ಸಿಎಂ ಬೊಮ್ಮಾಯಿ

ಜನರಿಗೆ ಕೈಗೆಟಕುವ ದರದಲ್ಲಿ ನಿವೇಶನಗಳ ಖರೀದಿಸಲು ಅನುಕೂಲವಾಗುವಂತೆ ಕಾನೂನುಗಳನ್ನು ಸರಳಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಬೆಂಗಳೂರಿನ ಯಲಹಂಕದಲ್ಲಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿಯಲ್ಲಿ ಮನೆಗಳನ್ನು ವಿತರಿಸಿದರು.
ಬೆಂಗಳೂರಿನ ಯಲಹಂಕದಲ್ಲಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿಯಲ್ಲಿ ಮನೆಗಳನ್ನು ವಿತರಿಸಿದರು.

ಬೆಂಗಳೂರು: ಜನರಿಗೆ ಕೈಗೆಟಕುವ ದರದಲ್ಲಿ ನಿವೇಶನಗಳ ಖರೀದಿಸಲು ಅನುಕೂಲವಾಗುವಂತೆ ಕಾನೂನುಗಳನ್ನು ಸರಳಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಬೆಂಗಳೂರಿನ ಯಲಹಂಕ ತಾಲೂಕಿನ ಅಗ್ರಹಾರಪಾಳ್ಯದಲ್ಲಿ ಮಂಗಳವಾರ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ ಲೋಕಾರ್ಪಣೆ ಮತ್ತು ವಸತಿ ಹಸ್ತಾಂತರ ಮಾಡಿ ಮಾತನಾಡಿದ ಅವರು, ಮನೆ ನಿರ್ಮಾಣಕ್ಕೆ ಕಂದಾಯ ಕಾಯ್ದೆಯಲ್ಲಿ ಯಾವುದೇ ನಿರ್ದಿಷ್ಟ ರಿಯಾಯಿತಿ ಇಲ್ಲ. ಬೇಡಿಕೆಯಿಂದಾಗಿ ಭೂಮಿಯ ಬೆಲೆಗಳು ಹೆಚ್ಚಿವೆ ಮತ್ತು ಪ್ರಸ್ತುತ ನಿಯಮಗಳು ಮತ್ತು ನಿಬಂಧನೆಗಳಿಂದಾಗಿ ಸಾಮಾನ್ಯ ಜನರು ನಿವೇಶನಗಳ ಖರೀದಿಸಲು ಕಷ್ಟಪಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮನೆಗಳ ನಿರ್ಮಾಣ ದುಬಾರಿಯಾಗಲಿದ್ದು, ಬಡವರು ಮನೆ ನಿರ್ಮಿಸಿಕೊಳ್ಳಲು ನಿವೇಶನ ಖರೀದಿಸಲು ಅನುಕೂಲವಾಗುವಂತೆ ನಿಯಮಗಳನ್ನು ಸರಳೀಕರಿಸಲಾಗುವುದು ಎಂದು ಹೇಳಿದರು.

ಬೆಂಗಳೂರು ಮತ್ತು ಇತರ ಸ್ಥಳಗಳಲ್ಲಿ ಕೈಗೆಟುಕುವ ಬೆಲೆಯಲ್ಲಿ ವಸತಿ ನಿವೇಶನಗಳನ್ನು ಖರೀದಿಸುವ ಮೂಲಕ ಬಡವರಿಗೆ ಮನೆ ನಿರ್ಮಿಸಲು ಸಹಾಯ ಮಾಡಲು ಪ್ರಸ್ತುತ ನಿಯಮಗಳು ಮತ್ತು ನಿಬಂಧನೆಗಳಲ್ಲಿನ ಅನೇಕ ಷರತ್ತುಗಳನ್ನು ತೆಗೆದುಹಾಕಲು ಕಾನೂನುಗಳಿಗೆ ವಿಶೇಷ ತಿದ್ದುಪಡಿಯನ್ನು ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಬಳಿಕ ತಮ್ಮ ಅಧಿಕಾರಾವಧಿಯ ಅಂತ್ಯದಲ್ಲಿ 15 ಲಕ್ಷ ಮನೆಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ ಮುಖ್ಯಮಂತ್ರಿಗಳು, ಅವರು ಸಾಕಷ್ಟು ಘೋಷಣೆಗಳನ್ನು ಮಾಡಬಹುದು, ಆದರೆ ಉದ್ದೇಶಕ್ಕಾಗಿ ಸಂಪನ್ಮೂಲಗಳನ್ನು ಮೀಸಲಿಡಬೇಕು. ಸುಮಾರು 15,000 ಕೋಟಿ ರೂಪಾಯಿಗಳ ಅಗತ್ಯವಿದ್ದ ಯೋಜನೆಗೆ 3,000 ಕೋಟಿ ರೂಪಾಯಿಗಳನ್ನು ಇಟ್ಟುಕೊಂಡಿದ್ದರು. ಬಿಜೆಪಿ ಸರ್ಕಾರವು 10 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದು, ಅದರಲ್ಲಿ 5 ಲಕ್ಷ ಮನೆಗಳು ಅಂತಿಮ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.

ಒಂದು ಪಕ್ಷವು ತನ್ನಿಂದ ಏನು ಮಾಡಲು ಸಾಧ್ಯ ಎಂಬುದನ್ನು ಜನರಿಗೆ ತಿಳಿಸಬೇಕು. ಜನರನ್ನು ದಾರಿ ತಪ್ಪಿಸಲು ಸುಳ್ಳು ಭರವಸೆಗಳನ್ನು ನೀಡಬಾರದು. "ನೀವು ಎಲ್ಲಾ ಸಮಯದಲ್ಲೂ ಜನರನ್ನು ವಂಚಿಸಲು ಸಾಧ್ಯವಿಲ್ಲ. ಎಲ್ಲವನ್ನೂ ಉಚಿತವಾಗಿ ಕೊಡುತ್ತೇವೆ ಎಂದು ಹೇಳಿದರೆ ಯಾರೂ ನಂಬುವುದಿಲ್ಲ. ತೆರಿಗೆದಾರರ ಹಣವನ್ನು ವಿವೇಚನೆಯಿಂದ ಖರ್ಚು ಮಾಡಬೇಕು ಎಂಬುದನ್ನು ಜವಾಬ್ದಾರಿಯುತ ಜನರು ತಿಳಿದಿರಬೇಕು ಎಂದರು.

ವಿ.ಸೋಮಣ್ಣ ವಸತಿ ಸಚಿವರಾದ ಬಳಿಕ ಇಲಾಖೆಗೆ ಹೊಸ ರೂಪ ನೀಡಿ ಬಾಕಿ ಇರುವ ಯೋಜನೆಗಳ ಪೂರ್ಣಗೊಳಿಸುವತ್ತ ಗಮನ ಹರಿಸಿದರು. ''ನಾನು ಸಿಎಂ ಆದ ನಂತರ 5 ಲಕ್ಷ ಮನೆಗಳು ಮಂಜೂರಾಗಿದ್ದು, ಅದರಲ್ಲಿ 4 ಲಕ್ಷ ಗ್ರಾಮೀಣ ಪ್ರದೇಶದಲ್ಲಿ ಮತ್ತು ಒಂದು ಲಕ್ಷ ಮನೆಗಳು ನಗರ ಪ್ರದೇಶದಲ್ಲಿವೆ. ಫಲಾನುಭವಿಗಳ ಆಯ್ಕೆ ಪ್ರಗತಿಯಲ್ಲಿದೆ. ನಮ್ಮ ಭರವಸೆಗಳನ್ನು ನಾವು ಈಡೇರಿಸುತ್ತಿದ್ದೇವೆ. ಕಳೆದ 7 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಒಂದು ಲಕ್ಷ ಮನೆಗಳನ್ನು ನಿರ್ಮಿಸುವ ಪ್ರಯತ್ನಗಳು ಸಫಲಗೊಂಡಿಲ್ಲ, ಏಕೆಂದರೆ ಭೂಮಿಯ ಲಭ್ಯತೆಯ ಬಗ್ಗೆ ಯೋಚಿಸದೆ ಆತುರಾತುರಿಯಲ್ಲಿ ಘೋಷಣೆ ಮಾಡಿರುವುದು.

ವಿವಿಧೆಡೆ 492 ಎಕರೆ ಜಾಗದಲ್ಲಿ 50 ಸಾವಿರ ಮನೆಗಳನ್ನು ನಿರ್ಮಿಸಲಾಗಿದ್ದು, ಅವು ವಿವಿಧ ಹಂತಗಳಲ್ಲಿವೆ. ಮೊದಲ ಹಂತದಲ್ಲಿ 20,000 ಮನೆಗಳನ್ನು ವಿತರಿಸಲಾಗಿದ್ದು, ಮಂಗಳವಾರ 5,000 ಮನೆಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com