ಬೆಂಗಳೂರಿನಲ್ಲಿ ಭೀಕರ ಅಪಘಾತ: ವ್ಯಕ್ತಿಯ ತಲೆ ಮೇಲೆ ಕಾರು ಹರಿದು ಬೈಕ್ ಸವಾರ ದುರ್ಮರಣ!
ಶಾಸಕ ಹಲತಾಳು ಹಾಲಪ್ಪ ಪಾಸ್ ಹೊಂದಿದ್ದ ಇನೋವಾ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೃಪತುಂಗ ರಸ್ತೆಯಲ್ಲಿ ನಡೆದಿದೆ.
Published: 06th February 2023 06:37 PM | Last Updated: 06th February 2023 06:39 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಶಾಸಕ ಹಲತಾಳು ಹಾಲಪ್ಪ ಪಾಸ್ ಹೊಂದಿದ್ದ ಇನೋವಾ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೃಪತುಂಗ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಇನೋವಾ ಕಾರು 2 ಬೈಕ್ ಹಾಗೂ ಎರಡು ಕಾರಿಗೆ ಡಿಕ್ಕಿ ಹೊಡೆದಿದೆ. ಇನ್ನು ಬೈಕ್ ನಲ್ಲಿ ತೆರಳುತ್ತಿದ್ದ ಎಚ್ಎಸ್ಆರ್ ಲೇಔಟ್ ನಿವಾಸಿ 39 ವರ್ಷದ ಮಾಜಿದ್ ಖಾನ್ ಎಂಬಾತ ಮೃತಪಟ್ಟಿದ್ದರೆ ಬೈಕ್ ಹಿಂಬದಿ ಕುಳಿತಿದ್ದ ರಿಯಾಜ್ ಕಾಲು ಮುರಿದಿದೆ. ಇನ್ನು ಗಾಯಾಳು ರಿಯಾಜ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸರಣಿ ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಲಸೂರು ಗೇಟ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತ ಸರಣಿ ಅಪಘಾತದಿಂದಾಗಿ ನೃಪತುಂಗ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಡಕಾಗಿತ್ತು.