ಮಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕರಾಟೆ ಶಿಕ್ಷಕನಿಗೆ 10 ವರ್ಷ ಜೈಲು ಶಿಕ್ಷೆ

ಪಡುಬಿದ್ರಿಯ ಕರಾಟೆ ತರಗತಿಯಲ್ಲಿ 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಫಾಸ್ಟ್ ಟ್ರ್ಯಾಕ್ ಪೊಕ್ಸೊ ನ್ಯಾಯಾಲಯ ಕರಾಟೆ ಶಿಕ್ಷಕನಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಒಟ್ಟು 22,000 ರೂ. ದಂಡ ವಿಧಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಪಡುಬಿದ್ರಿಯ ಕರಾಟೆ ತರಗತಿಯಲ್ಲಿ 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಫಾಸ್ಟ್ ಟ್ರ್ಯಾಕ್ ಪೊಕ್ಸೊ ನ್ಯಾಯಾಲಯ ಕರಾಟೆ ಶಿಕ್ಷಕನಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಒಟ್ಟು 22,000 ರೂ. ದಂಡ ವಿಧಿಸಿದೆ.

ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ಆರೋಪಿ ಉಮೇಶ್ ಬಂಗೇರ ಅವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ತಲಾ 10,000 ರೂ. ದಂಡವನ್ನು ಕ್ರಮವಾಗಿ ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಿಸುವ (ಪೊಕ್ಸೊ) ಕಾಯ್ದೆಯ ಸೆಕ್ಷನ್ 6 ಮತ್ತು ಐಪಿಸಿಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ವಿಧಿಸಿದ್ದಾರೆ.

ಕರಾಟೆ ಶಿಕ್ಷಕನಿಗೆ ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಮತ್ತು ಪೊಕ್ಸೊ ಕಾಯ್ದೆಯ ಸೆಕ್ಷನ್ 8ರ ಅಡಿಯಲ್ಲಿ ಅಪರಾಧಗಳಿಗಾಗಿ ಒಂದು ವರ್ಷದ ಸಾದಾ ಜೈಲು ಶಿಕ್ಷೆ ಮತ್ತು ತಲಾ 1,000 ರೂ. ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ನಡೆಯುತ್ತವೆ ಎಂದು ನ್ಯಾಯಾಧೀಶರು ಹೇಳಿದರು.

ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್ ಪ್ರಕಾರ, ಉಮೇಶ್ ಬಂಗೇರ 2020ರ ಫೆಬ್ರುವರಿ 12 ರಂದು ಪಡುಬಿದ್ರಿಯಲ್ಲಿ ಕರಾಟೆ ತರಗತಿಗಳನ್ನು ಮುಗಿಸಿದ ನಂತರ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.

2020ರ ಸೆಪ್ಟೆಂಬರ್ 27 ರಂದು, ಬಂಗೇರ ಬಾಲಕಿಯ ತಾಯಿಗೆ ಕರೆ ಮಾಡಿ ಮಗಳನ್ನು ಕರಾಟೆ ತರಗತಿಗೆ ಕಳುಹಿಸುವಂತೆ ಕೇಳಿದ್ದಾನೆ. ಈ ವೇಳೆ ಬಾಲಕಿ ತರಗತಿಗೆ ಹೋಗಲು ನಿರಾಕರಿಸಿದ್ದು, ಲೈಂಗಿಕ ದೌರ್ಜನ್ಯದ ಬಗ್ಗೆ ತನ್ನ ತಾಯಿಗೆ ತಿಳಿಸಿದ್ದಾಳೆ.

ಬಳಿಕ ಅವರು ಕಾಪು ಪೊಲೀಸರಿಗೆ ನೀಡಿದ ದೂರಿನ ಮೇರೆಗೆ ಅಂದಿನ ಸರ್ಕಲ್ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್, ಆರೋಪಿ ಬಂಗೇರನನ್ನು ಬಂಧಿಸಿ ಐಪಿಸಿ ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವೈ ಟಿ ರಾಘವೇಂದ್ರ ಅವರು ನ್ಯಾಯಾಲಯದ ಮುಂದೆ 13 ಸಾಕ್ಷಿಗಳನ್ನು ವಿಚಾರಣೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com