ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ: ಸ್ವಾಗತ ಕೋರಿದ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ
ರಾಜಧಾನಿ ಬೆಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಂದಿಳಿದಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ತೋವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡರು.
Published: 06th February 2023 11:44 AM | Last Updated: 06th February 2023 06:12 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಂದಿಳಿದಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ತೋವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡರು.
ಮೋದಿಯವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಸ್ವಾಗತ ಕೋರಿದರು. ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ಹೆಲಿಕಾಪ್ಟರ್ ಮೂಲಕ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ತೆರಳಲಿದ್ದಾರೆ.
ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಬಿಐಇಸಿಯಲ್ಲಿ 4 ಹೆಲಿಪ್ಯಾಡ್ಗಳ ನಿರ್ಮಾಣ ಮಾಡಲಾಗಿದೆ. ಬಿಐಇಸಿ ಕೇಂದ್ರದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು: ಇಂಡಿಯನ್ ಎನರ್ಜಿ ವೀಕ್-2023 ಸೇರಿ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಭಾಗಿ
ಪ್ರಧಾನಿ ಅವರ ಆಗಮನದ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆಯನ್ನು ಪರಿಶೀಲಿಸಿದ್ದರು.
ದೇಶ ವಿದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಗಣ್ಯರು ಆಗಮಿಸಲಿದ್ದು, ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ. ಪ್ರಧಾನಿ ಅವರು ಬರುತ್ತಿರುವ ಹಿನ್ನೆಲೆ ಮಾರ್ಗಗಳಲ್ಲೂ ಬದಲಾವಣೆ ಮಾಡಲಾಗಿದೆ.