ಬಿಬಿಎಂಪಿ ವ್ಯಾಪ್ತಿಯಲ್ಲಿ 108 'ನಮ್ಮ ಕ್ಲಿನಿಕ್' ಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ  ರಾಣಿ ಅಬ್ಬಕ್ಕ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ನಮ್ಮ ಕ್ಲಿನಿಕ್” ಉದ್ಘಾಟಿಸಿದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಅಬಕಾರಿ ಸಚಿವ ಗೋಪಾಲಯ್ಯ ಮತ್ತಿತರರು ಉಪಸ್ಥಿತರಿದ್ದರು.
ನಮ್ಮ ಕ್ಲಿನಿಕ್ ಗಳಿಗೆ ಸಿಎಂ ಬೊಮ್ಮಾಯಿ ಚಾಲನೆ
ನಮ್ಮ ಕ್ಲಿನಿಕ್ ಗಳಿಗೆ ಸಿಎಂ ಬೊಮ್ಮಾಯಿ ಚಾಲನೆ
Updated on

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 108 'ನಮ್ಮ ಕ್ಲಿನಿಕ್' ಗಳಿಗೆ ಮಂಗಳವಾರ ಚಾಲನೆ ದೊರೆಯಿತು. ಬಿಬಿಎಂಪಿ ಸಹಯೋಗದಲ್ಲಿ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ  ರಾಣಿ ಅಬ್ಬಕ್ಕ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ನಮ್ಮ ಕ್ಲಿನಿಕ್” ಉದ್ಘಾಟಿಸಿದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಅಬಕಾರಿ ಸಚಿವ ಗೋಪಾಲಯ್ಯ ಮತ್ತಿತರರು ಉಪಸ್ಥಿತರಿದ್ದರು.

ನಂತರ ಮಾತನಾಡಿದ ಮುಖ್ಯಮಂತ್ರಿ, "ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ಉತ್ತಮ ವೈದ್ಯಕೀಯ ಸೌಲಭ್ಯ ನೀಡುವ ಸಲುವಾಗಿ  ಸರ್ಕಾರ 108 "ನಮ್ಮ ಕ್ಲಿನಿಕ್" ಗಳನ್ನು ಆರಂಭಿಸಿದೆ. ಬರುವ ದಿನಗಳಲ್ಲಿ ನಮ್ಮ ಕ್ಲಿನಿಕ್ ಗಳ ಸಂಖ್ಯೆಗಳನ್ನು ಹೆಚ್ಚಿಸಲಾಗುವುದು, ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ"ಎಂಬುದು ನಮ್ಮ ಸರ್ಕಾರದ ಸಂಕಲ್ಪವಾಗಿದೆ ಎಂದರು.

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮಾತನಾಡಿ, ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ರೂ. 150 ಕೋಟಿ ವೆಚ್ಚದಲ್ಲಿ 438 ನಮ್ಮ ಕ್ಲಿನಿಕ್‌ ಸ್ಥಾಪಿಸಲಾಗುತ್ತಿದ್ದು, ಬೆಂಗಳೂರಿನಲ್ಲಿ ಒಟ್ಟು 243 ನಮ್ಮ ಕ್ಲಿನಿಕ್‌ಗಳು ಸ್ಥಾಪನೆಗೊಳ್ಳುತ್ತಿವೆ.
ಈಗಾಗಲೇ ರಾಜ್ಯಾದ್ಯಂತ 100 ನಮ್ಮ ಕ್ಲಿನಿಕ್ ಗಳಿಗೆ ಚಾಲನೆ ದೊರೆತಿದ್ದು, ಇಂದು ಬೆಂಗಳೂರಿನಲ್ಲಿ 108 ನಮ್ಮ ಕ್ಲಿನಿಕ್‌ಗಳಿಗೆ ಚಾಲನೆ ದೊರೆತಿದೆ ಎಂದು ತಿಳಿಸಿದರು. 

ನಗರ ಪ್ರದೇಶದಲ್ಲಿ 50-60 ಸಾವಿರ ಜನಸಂಖ್ಯೆಗೆ ಒಂದರಂತೆ ಕ್ಲಿನಿಕ್‌ಗಳು ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಈಗ, 'ನಮ್ಮ ಕ್ಲಿನಿಕ್'‌ ಯೋಜನೆಯಿಂದಾಗಿ 15-20 ಸಾವಿರ ಜನಸಂಖ್ಯೆಗೆ ಒಂದರಂತೆ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗುತ್ತಿದೆ.ಜನಪರವಾದ ಆಡಳಿತವೇ ನಮ್ಮ ಸರ್ಕಾರದ ಗುರಿ ಎಂದರು.

ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಡಾ. ಕೆ. ಸುಧಾಕರ್, ನಮ್ಮ ಕ್ಲಿನಿಕ್ ಗೆ ಭೇಟಿ ನೀಡಿ, ಸಲಕರಣೆಗಳು, ಸೌಲಭ್ಯಗಳನ್ನು ವೀಕ್ಷಿಸಿದರು. ವೈದ್ಯರಿಂದ ಮಾಹಿತಿ ಪಡೆದುಕೊಂಡು ಅಗತ್ಯ, ಸಲಹೆ, ಸೂಚನೆಗಳನ್ನು ನೀಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com