ಟರ್ಕಿ, ಸಿರಿಯಾದಲ್ಲಿ ಭೂಕಂಪ: ಕನ್ನಡಿಗರ ಮಾಹಿತಿಗಾಗಿ ಶೀಘ್ರದಲ್ಲೇ ಸಹಾಯವಾಣಿ ಸ್ಥಾಪನೆ- ಸಿಎಂ ಬೊಮ್ಮಾಯಿ

ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಅಲ್ಲಿರುವ ಭಾರತೀಯರು ಹಾಗೂ ಕನ್ನಡಿಗರ ಮಾಹಿತಿಗಾಗಿ ವಿಶೇಷ ಸಹಾಯವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯ ಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊ್ಮಾಯಿ
ಸಿಎಂ ಬಸವರಾಜ ಬೊ್ಮಾಯಿ

ಬೆಂಗಳೂರು: ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಅಲ್ಲಿರುವ ಭಾರತೀಯರು ಹಾಗೂ ಕನ್ನಡಿಗರ ಮಾಹಿತಿಗಾಗಿ ವಿಶೇಷ ಸಹಾಯವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯ ಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ರಾಜ್ಯಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕಲ್ಲಿದ್ದು, ಅಲ್ಲಿರುವ ಕನ್ನಡಿಗರಿಗೆ ನೆರವಾಗಲು, ಅವರ ಕುರಿತು ಮಾಹಿತಿಯನ್ನು ಸರ್ಕಾರದ  ಜೊತೆ ಹಂಚಿಕೊಳ್ಳುವಂತೆ ಅವರ ಸಂಬಂಧಿಕರ ಬಳಿ ಮನವಿ ಮಾಡುತ್ತೇನೆ ಎಂದರು.

ಸೋಮವಾರ ಟರ್ಕಿ ಮತ್ತು ನೆರೆಯ ಸಿರಿಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 5,000ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಕಟ್ಟಡಗಳು ಧ್ವಂಸಗೊಂಡಿವೆ. ಇದು ಟರ್ಕಿಯ ಆಗ್ನೇಯ ಪ್ರಾಂತ್ಯದ ಕಹ್ರಮನ್ಮರಸ್‌ನಲ್ಲಿ ಕೇಂದ್ರೀಕೃತವಾಗಿತ್ತು . ಭಾರತದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡ ಮಂಗಳವಾರ ಟರ್ಕಿಗೆ ತೆರಳಿದ್ದು, ಅಲ್ಲಿನ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com