ಎಟಿಎಂಗೆ ತುಂಬಬೇಕಿದ್ದ 1.3 ಕೋಟಿ ರೂ. ಹಣದೊಂದಿಗೆ ಆರೋಪಿಗಳು ಪರಾರಿ; ಪೊಲೀಸರ ಹುಡುಕಾಟ

ಎಟಿಎಂ ಯಂತ್ರಕ್ಕೆ ತುಂಬಬೇಕಿದ್ದ 1.03 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಬೆಂಗಳೂರು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಎಟಿಎಂ ಯಂತ್ರಕ್ಕೆ ತುಂಬಬೇಕಿದ್ದ 1.03 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಬೆಂಗಳೂರು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಚಿನ್ನಮ್ಮ ಲೇಔಟ್ ನಿವಾಸಿ ರಾಜೇಶ್ ಮೇಸ್ತ ಎಂದು ಗುರುತಿಸಲಾಗಿದೆ. ಖಾಸಗಿ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಪತ್ನಿ ಸಮೇತ ಲೂಟಿಯೊಂದಿಗೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್ ನಲ್ಲಿ ಕೆಲಸ ಮಾಡುತ್ತಿದ್ದರು. ಬ್ಯಾಂಕ್‌ಗಳಿಂದ ಹಣವನ್ನು ಸಂಗ್ರಹಿಸಿ ಎಟಿಎಂಗೆ ಜಮಾ ಮಾಡುವ ಒಪ್ಪಂದವನ್ನು ಏಜೆನ್ಸಿ ಹೊಂದಿದೆ. ಆರೋಪಿ ರಾಜೇಶ್ ಮೇಸ್ತಾ ಅದಕ್ಕೆ ಪ್ರಭಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

2022ರ ಡಿಸೆಂಬರ್ 28 ರಿಂದ ಬಿಟಿಎಂ ಲೇಔಟ್, ಕೋರಮಂಗಲ ಮತ್ತು ಬನ್ನೇರುಘಟ್ಟ ರಸ್ತೆಯ ಎಟಿಎಂಗಳಿಗೆ ಹಣವನ್ನು ತುಂಬುವ ಜವಾಬ್ದಾರಿಯನ್ನು ಅವರು ಹೊಂದಿದ್ದರು. ಆರೋಪಿಗಳು ಫೆಬ್ರುವರಿ 1 ರಿಂದ ಕಚೇರಿಗೆ ತಿಳಿಸದೆ ಗೈರುಹಾಜರಾಗಿದ್ದರು.

ಅವರ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಕಚೇರಿಯಲ್ಲಿ ಅನುಮಾನ ಮೂಡಿತು. ಎಟಿಎಂಗಳಲ್ಲಿ ತುಂಬಲಾದ ಹಣದ ಖಾತೆಗಳನ್ನು ಪರಿಶೀಲಿಸಿದಾಗ ಅವರು 1.03 ಕೋಟಿ ರೂ. ಗಳನ್ನು ಸ್ವತಃ ತೆಗೆದುಕೊಂಡು ಪರಾರಿಯಾಗಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಏಜೆನ್ಸಿಯ ಉಪನಿರ್ದೇಶಕ ಎಸ್.ಎ.ರಾಘವೇಂದ್ರ ಅವರು ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com