ರಸ್ತೆಗೆ ಪುನೀತ್ ಹೆಸರು ನಾಮಕರಣ, ಆದರೆ ಫ್ಲೆಕ್ಸ್ ನಲ್ಲಿ ಅಪ್ಪು ಫೋಟೋನೇ ಇಲ್ಲ; ರಾಜಕೀಯ ನಾಯಕರ ವಿರುದ್ಧ ಫ್ಯಾನ್ಸ್ ಕಿಡಿ!

ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ನಗರದ ರಸ್ತೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗುತ್ತಿದ್ದು, ವಿಪರ್ಯಾಸವೆಂದರೆ ಈ ಕುರಿತ ಬ್ಯಾನರ್ ನಲ್ಲಿ ಅಪ್ಪು ಫೋಟೋ ಹಾಕುವುದನ್ನೇ ಅಧಿಕಾರಿಗಳು ಮರೆತಿದ್ದಾರೆ.
ಪುನೀತ್ ರಸ್ತೆ ಉದ್ಘಾಟನೆ ಕುರಿತ ಬ್ಯಾನರ್
ಪುನೀತ್ ರಸ್ತೆ ಉದ್ಘಾಟನೆ ಕುರಿತ ಬ್ಯಾನರ್
Updated on

ಬೆಂಗಳೂರು: ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ನಗರದ ರಸ್ತೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗುತ್ತಿದ್ದು, ವಿಪರ್ಯಾಸವೆಂದರೆ ಈ ಕುರಿತ ಬ್ಯಾನರ್ ನಲ್ಲಿ ಅಪ್ಪು ಫೋಟೋ ಹಾಕುವುದನ್ನೇ ಅಧಿಕಾರಿಗಳು ಮರೆತಿದ್ದಾರೆ.

ಹೌದು.. ನಟ ಪುನೀತ್ ರಾಜ್​ಕುಮಾರ್ ನಿಧನದ ನಂತರದಲ್ಲಿ ಅವರನ್ನು ಬೇರೆ ಬೇರೆ ರೀತಿಯಲ್ಲಿ ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿದೆ. ರಸ್ತೆ, ವೃತ್ತ, ಪಾರ್ಕ್​ಗೆ ಪುನೀತ್ ರಾಜ್​ಕುಮಾರ್ ಅವರ ಹೆಸರನ್ನು ಇಡಲಾಗುತ್ತಿದೆ. ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಪುನೀತ್ ಹೆಸರು ಇಡುವ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿತ್ತು. ಇಂದು (ಫೆ.7) ಈ ರಸ್ತೆಗೆ ಪುನೀತ್ ಹೆಸರು ನಾಮಕರಣ ಆಗುತ್ತಿದೆ. ಇದಕ್ಕಾಗಿ ಫ್ಲೆಕ್ಸ್ ಮಾಡಿಸಲಾಗಿದ್ದು, ಪುನೀತ್ ಫೋಟೋನೇ ಅಲ್ಲಿ ಕಾಣುತ್ತಿಲ್ಲ.

ನಗರದ ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಪುನೀತ್ ಹೆಸರನ್ನು ಇಡಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಇದಕ್ಕಾಗಿ ಹಾಕಿದ ಫ್ಲೆಕ್ಸ್​​ನಲ್ಲಿ ರಾಜಕೀಯ ನಾಯಕರ ಫೋಟೋ ರಾರಾಜಿಸಿದೆ. ಆದರೆ, ಎಲ್ಲಿಯೂ ಪುನೀತ್ ರಾಜ್​ಕುಮಾರ್ ಫೋಟೋ ಇಲ್ಲ. ಇದಕ್ಕೆ ಅಭಿಮಾನಿಗಳ ವಲಯದಿಂದ ಟೀಕೆ ವ್ಯಕ್ತವಾಗುತ್ತಿದೆ.

ಉದ್ಘಾಟನಾ ಸಮಾರಂಭ ಎಂದು ದೊಡ್ಡದಾಗಿ ಫ್ಲೆಕ್ಸ್ ಹಾಕಿಸಲಾಗಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ತೇಜಸ್ವಿ ಸೂರ್ಯ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರ ಫೋಟೋಗಳು ಇವೆ. ಆದರೆ ಯಾರಿಗೋಸ್ಕರ ಈ ಕಾರ್ಯಕ್ರಮ ಮಾಡಲಾಗುತ್ತಿದೆಯೋ ಅವರ ಫೋಟೋವನ್ನು ಎಲ್ಲಿಯೂ ಹಾಕಿಲ್ಲ. ಇದಕ್ಕೆ ಅಭಿಮಾನಿಗಳ ವಲಯದಿಂದ ಟೀಕೆ ವ್ಯಕ್ತವಾಗಿದೆ. ಪುನೀತ್ ರಾಜ್​ಕುಮಾರ್ ಅವರ ಫೋಟೋವನ್ನು ಹಾಕಬೇಕಿತ್ತು ಎಂದು ಅನೇಕರು ಆಗ್ರಹಿಸಿದ್ದಾರೆ.

ಅಭಿಮಾನಿಗಳ ಆಕ್ರೋಶ:
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪುನೀತ್ ಅವರ ಅಭಿಮಾನಿಗಳು, ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ನಾಯಕರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.  'ಪುನೀತ್ ರಾಜಕುಮಾರ್ ರಸ್ತೆ ನಾಮಕರಣ ಸಮಾರಂಭ ಅಂತೆ, ಆದರೆ ನಮ್ಮ ಅಪ್ಪು ಫೋಟೋ ಹಾಕಬೇಕು ಎಂಬ ಬುದ್ದಿ ಇಲ್ಲ, ಈ ರೀತಿ ರಾಜಕೀಯ ಕಾರ್ಯಕ್ರಮ ಮಾಡಿ ಪ್ರಚಾರ ಪಡೆಯುವ ನೀಚ ರಾಜಕೀಯ ಬಿಡಿ' ಎಂದು ಪುನೀತ್ ಅಭಿಮಾನಿಯೊಬ್ಬರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. 

ಮತ್ತೊಬ್ಬರು, ''ಒಳ್ಳೆದಾಯ್ತು ಬಿಡಿ, ಇವರ ಜೊತೆ ಅವರ ಫೋಟೋ ಇದ್ದಿದ್ದರೆ ತುಂಬಾ ವ್ಯಂಗ್ಯವಾಗಿರೋದು'' ಎಂದು ವ್ಯಂಗ್ಯ ಮಾಡಿದ್ದಾರೆ.

ಕಾರ್ಯಕ್ರಮದ ವಿವರ
ಫೆಬ್ರವರಿ 7 ಅಂದರೆ ಇಂದು ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಸ್ತೆಯನ್ನು ಉದ್ಘಾಟನೆ ಮಾಡಲಿದ್ದಾರೆ. ‘ಬಾನದಾರಿಯಲ್ಲಿ ಪುನೀತ್ ಪಯಣ’ ಎಂದು ಕಾರ್ಯಕ್ರಮಕ್ಕೆ ಹೆಸರು ನೀಡಲಾಗಿದೆ. ಪದ್ಮನಾಭ ನಗರದ ವಾಜಪೇಯಿ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಉದ್ಘಾಟನೆ ಬಳಿಕ ಸಂಗೀತ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ರಾಜೇಶ್ ಕೃಷ್ಣನ್ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಕಾರ್ಯಕ್ರಮದಲ್ಲಿ ನಟ ಶಿವರಾಜ್‍ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ಪುನೀತ್ ಪತ್ನಿ ಅಶ್ವಿನಿ ಪುನೀತ್‍ರಾಜ್‍ಕುಮಾರ್ ಸೇರಿ ಅನೇಕರು ಭಾಗಿಯಾಗಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com