ಮಂಗಳೂರು: ಹಾಸ್ಟೆಲ್‌ನಲ್ಲಿ 89ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜ್ ನ ಹಾಸ್ಟೆಲ್‌ನಲ್ಲಿ ಕಲುಶಿತ ಆಹಾರ ಸೇವಿಸಿ 89ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
Published: 07th February 2023 12:25 AM | Last Updated: 07th February 2023 07:38 PM | A+A A-

ಸಿಟಿ ಆಸ್ಪತ್ರೆ
ಮಂಗಳೂರು: ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜ್ ನ ಹಾಸ್ಟೆಲ್‌ನಲ್ಲಿ ಕಲುಶಿತ ಆಹಾರ ಸೇವಿಸಿ 89ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಮಂಗಳೂರು ನಗರ ಪೊಲೀಸರ ಪ್ರಕಾರ, ಸೋಮವಾರ ಬೆಳಗ್ಗೆಯಿಂದ ಶಕ್ತಿನಗರದ ನರ್ಸಿಂಗ್ ಕಾಲೇಜು ಹಾಸ್ಟೆಲ್‌ನ 89 ವಿದ್ಯಾರ್ಥಿಗಳು ಆಹಾರ ಸೇವಿಸಿದ ನಂತರ ವಾಂತಿ, ತಲೆಸುತ್ತುವಿಕೆ ಕಂಡು ಬಂದಿದ್ದರಿಂದ ಅವರನ್ನು ನಗರದ ಎಜೆ ಆಸ್ಪತ್ರೆ, ಸಿಟಿ ಆಸ್ಪತ್ರೆ ಮತ್ತು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿ: ಆಂಧ್ರ ಪ್ರದೇಶದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ವಿಷಾಹಾರ ಸೇವನೆ ಶಂಕೆ
ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರು ವಿದ್ಯಾರ್ಥಿಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ಒಂದು ತಂಡ ದುರ್ಘಟನೆ ನಡೆದ ಹಾಸ್ಟೆಲ್‌ಗೆ ಭೇಟಿ ನೀಡಿ ತನಿಖೆ ನಡೆಸಿದೆ.