ಬಜೆಟ್'ನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ ಮೀಸಲಿಡಿ: ಪ್ರೊ.ದೊರೆಸ್ವಾಮಿ
ಮುಂಬರುವ ರಾಜ್ಯ ಬಜೆಟ್‌ನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ಪ್ರತ್ಯೇಕ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಡಾ.ಎಂ.ಆರ್.ದೊರೆಸ್ವಾಮಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Published: 08th February 2023 10:17 AM | Last Updated: 08th February 2023 03:48 PM | A+A A-

ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಡಾ.ಎಂ.ಆರ್.ದೊರೆಸ್ವಾಮಿ.
ಬೆಂಗಳೂರು: ಮುಂಬರುವ ರಾಜ್ಯ ಬಜೆಟ್‌ನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ಪ್ರತ್ಯೇಕ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಡಾ.ಎಂ.ಆರ್.ದೊರೆಸ್ವಾಮಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಅವರು, ಸರ್ಕಾರಿ ಶಾಲೆಗಳಲ್ಲಿ ಭೌತಿಕ ಮೂಲಸೌಕರ್ಯ, ತರಗತಿ, ಶೌಚಾಲಯ, ಕಾಂಪೌಂಡ್, ಗ್ರಂಥಾಲಯ, ಶುದ್ದ ಕುಡಿಯುವ ನೀರಿನ ಅಭಿವೃದ್ಧಿಗೆ 10 ಸಾವಿರ ಕೋಟಿ ಅನುದಾನ ಮಂಜೂರು ಮಾಡಬೇಕು ಮತ್ತು ಶಾಲೆಗಳ ದುರಸ್ಥಿ ಮತ್ತು ನಿರ್ವಹಣಾ ಕಾರ್ಯಕ್ಕೆ ಪ್ರತ್ಯೇಕವಾಗಿ ರೂ.3 ಸಾವಿರ ಕೋಟಿ ಒದಗಿಸಬೇಕೆಂದು ಕೋರಿದ್ದಾರೆ.
ಇದನ್ನೂ ಓದಿ: 224 ಶಾಸಕರಲ್ಲಿ ಶೇಕಡ 10 ರಷ್ಟು ಮಂದಿ ಮಾತ್ರ ಸರ್ಕಾರಿ ಶಾಲೆಗಳ ದತ್ತು ಪಡೆದುಕೊಂಡಿದ್ದಾರೆ: ದೊರೆಸ್ವಾಮಿ
ಅದೇ ರೀತಿ ಶಿಕ್ಷಣದ ಮೇಲೋದ್ದೇಶಗಳನ್ನು ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯನ್ನು ರಾಷ್ಟ್ರೀಯ ಶಿಕ್ಷಣ ನೀತಿ 2020ಕ್ಕೆ ಅನುಗುಣವಾಗಿ ರೂಪಿಸಲು 2023-24ನೇ ಸಾಲಿನ ಬಜೆಟ್ ನಲ್ಲಿ ನನ್ನ ಆರು ಶಿಫಾರುಗಳನ್ನು ಅನುಮೋದಿಸಿ ಘೋಷಿಸಬೇಕು. ಶಿಕ್ಷಣದ ಎಲ್ಲಾ ಹಂತಗಳಲ್ಲೂ ಮಾರ್ದರ್ಶಿತ್ವ (ಮೆಂಟರ್) ಅಳವಡಿಸಬೇಕು. ಯೋಗ ಮತ್ತು ಧ್ಯಾನವನ್ನು ಶಿಕ್ಷಣದ ಎಲ್ಲಾ ಹಂತಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.