ಉಜಿರೆಯ ಲಾಡ್ಜ್ ಮೇಲೆ ದಾಳಿ, ವೇಶ್ಯಾವಾಟಿಕೆ ದಂಧೆ ಭೇದಿಸಿದ ಪೊಲೀಸರು; ಇಬ್ಬರ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಪ್ರದೇಶದ ವಸತಿಗೃಹದ ಮೇಲೆ ದಾಳಿ ನಡೆಸಲಾಗಿದ್ದು, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
Published: 08th February 2023 01:40 PM | Last Updated: 08th February 2023 01:40 PM | A+A A-

ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಪ್ರದೇಶದ ವಸತಿಗೃಹದ ಮೇಲೆ ದಾಳಿ ನಡೆಸಲಾಗಿದ್ದು, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ನಾಗರಿಕ ಸಮಾಜ ಸಂಘಟನೆಯ ಕಾರ್ಯಕರ್ತರಿಂದ ಮಾಹಿತಿ ಪಡೆದು ಮಂಗಳವಾರ ಸಂಜೆ ನಡೆಸಿದ ದಾಳಿಯಲ್ಲಿ ಐವರು ಮಹಿಳೆಯರನ್ನು ರಕ್ಷಿಸಲಾಗಿದೆ.
ಸೋಮವಾರ ರಾತ್ರಿ ಉಜಿರೆಯ 20 ಲಾಡ್ಜ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮಂಗಳವಾರ ಮತ್ತೆ ದಾಳಿ ನಡೆಸಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ಅಮತೆ ವಿಕ್ರಮ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪ ಎಸ್‌ಪಿ ಪ್ರತಾಪ್ ಸಿಂಗ್ ಥೋರಟ್ ಮತ್ತು ಅವರ ತಂಡ ಕಾರ್ಯಾಚರಣೆ ನಡೆಸಿತು.
ಈ ಸಂಬಂಧ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.