ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ; 9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಪ್ರಾರಂಭ: ಸಿಎಂ ಬೊಮ್ಮಾಯಿ

ಎಸ್‌ಸಿ, ಎಸ್‌ಟಿ ಸಮಾಜಕ್ಕೆ ನ್ಯಾಯ ದೊರಕಿಸುಕೊಡುವುದೇ ನಮ್ಮ ಸರ್ಕಾರದ ಏಕೈಕ ಗುರಿಯಾಗಿದ್ದು, ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು 9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಿಎಸ್ ಬೊಮ್ಮಾಯಿ
ಬಿಎಸ್ ಬೊಮ್ಮಾಯಿ

ದಾವಣಗೆರೆ: ಎಸ್‌ಸಿ, ಎಸ್‌ಟಿ ಸಮಾಜಕ್ಕೆ ನ್ಯಾಯ ದೊರಕಿಸುಕೊಡುವುದೇ ನಮ್ಮ ಸರ್ಕಾರದ ಏಕೈಕ ಗುರಿಯಾಗಿದ್ದು, ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು 9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು 'ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ' ಅಂಗವಾಗಿ 'ಜನಜಾಗೃತಿ ಜಾತ್ರಾ ಮಹೋತ್ಸವದ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ'ದಲ್ಲಿ ಪಾಲ್ಗೊಂಡು  ಮಾತನಾಡಿದರು.

ನಾಗಮೋಹನ್ ದಾಸ್ ವರದಿಯಂತೆ ತುಳಿತಕ್ಕೊಳಗಾಗಿರುವ ಸಮಾಜದವರ ಪರವಾಗಿ ನ್ಯಾಯ ನೀಡಲಾಗಿದೆ. ಎಸ್ ಸಿ ವರ್ಗಕ್ಕೆ ಶೇ. 15ರಿಂದ ಶೇ.17 ಮತ್ತು ಎಸ್ ಟಿ ಗೆ 3ರಿಂದ ಶೇ. 7ಕ್ಕೆ ಹೆಚ್ಚಿಸಲಾಗಿದೆ. ತಳಸಮುದಾಯದ ಯುವಜನತೆಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಲಾಭ ದೊರೆಯಲಿದೆ. ಈ ಹೆಚ್ಚಳಕ್ಕೆ ಕಾನೂನಿನ ರಕ್ಷಣೆಯನ್ನು ಈಗಾಗಲೇ ಸರ್ಕಾರ ನೀಡಿದೆ. ಕೇವಲ ಭಾಷಣದಿಂದ ಸಾಮಾಜಿಕ ನ್ಯಾಯ ಸಿಗುವುದಿಲ್ಲ. ಮೀಸಲಾತಿ ಹೆಚ್ಚಳವನ್ನು ಸರ್ಕಾರ ಈಗಾಗಲೇ ಜಾರಿ ಮಾಡಿದ್ದು, ಸರ್ಕಾರದ ನೇಮಕಾತಿಗಳಲ್ಲಿ ಈ ನಿಯಮವನ್ನು ಈಗಾಗಲೇ ಪಾಲಿಸಲಾಗುತ್ತಿದೆ ಎಂದರು.

ಪರಿಶಿಷ್ಟ ಪಂಗಡದ ಸಮುದಾಯಗಳ ಅಭಿವೃದ್ಧಿ ಪ್ರತ್ಯೇಕ ಸಚಿವಾಲಯ:
ನಾನು ಬಯಸಿ ಮುಖ್ಯಮಂತ್ರಿಯಾದವನಲ್ಲ. ನಮ್ಮನಾಯಕರು ಹಾಗೂ ಜನರಿಂದ ಈ ಆಶೀರ್ವಾದ ನನಗೆ ದೊರೆಯಿತು. ಪರಿಶಿಷ್ಟ ಪಂಗಡದ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಲು ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. 75 ಯೂನಿಟ್ ಉಚಿತ ವಿದ್ಯುತ್, ಸಮುದಾಯದ ರೈತರಿಗೆ ಜಮೀನು ಖರೀದಿಗೆ 25 ಲಕ್ಷದವರೆಗೆ ಅನುದಾನ, ಮನೆ ನಿರ್ಮಾಣಕ್ಕೆ 2 ಲಕ್ಷ, ಹಾಸ್ಟೆಲ್ ಗಳ ಹೆಚ್ಚಳ ಮಾಡಲಾಗಿದೆ. ಸಮುದಾಯದ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಸಹಕಾರ ನೀಡಲಾಗುತ್ತಿದೆ. ಪರಿಶಿಷ್ಟ ಪಂಗಡದ ಬುಡಕಟ್ಟು ಸಮುದಾಯಗಳಿಗೆ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರ ನೀಡಿದೆ. ಬುಡಕಟ್ಟು ಜನಾಂಗಕ್ಕೆ ಸೇರಿದ ಶ್ರೀಮತಿ ದ್ರೌಪದಿ ಮುರ್ಮು ಅವರು ಗೌರವಾನ್ವಿತ ರಾಷ್ಟ್ರಪತಿಗಳಾಗಿದ್ದಾರೆ. ಸಮುದಾಯದ ಜನನಾಯಕರಿಗೆ ಸರ್ಕಾರದಲ್ಲಿ ಪ್ರಮುಖ ಸ್ಥಾನಮಾನಗಳನ್ನು ನೀಡಲಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com