ಒಂದು ಅಂಕ ಹೆಚ್ಚು ಬಂದರೂ ಮರುಮೌಲ್ಯಮಾಪನಕ್ಕೆ ಪರಿಗಣಿಸಲಾಗುವುದು: ಸಚಿವ ಬಿಸಿ.ನಾಗೇಶ್

ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ 'ಒಂದು ಅಂಕ' ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದರು.
ಸಚಿವ ಬಿಸಿ ನಾಗೇಶ್.
ಸಚಿವ ಬಿಸಿ ನಾಗೇಶ್.

ಬೆಂಗಳೂರು: ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ 'ಒಂದು ಅಂಕ' ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದರು.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2023ರ ಮಾರ್ಚ್‌ನಲ್ಲಿ ನಡೆಯುವ 'ವಾರ್ಷಿಕ ಪರೀಕ್ಷೆ'ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ ಎಂದು ಹೇಳಿದ್ದಾರೆ.

ಹಾಲಿ ಇರುವ ನಿಯಮದ ಪ್ರಕಾರ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಪತ್ರಿಕೆಯ ಒಟ್ಟು ಅಂಕದ ಶೇ.6ರಷ್ಟು ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳು ಬಂದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಶೇ.6ಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಅಂಕವು ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ‘ಒಂದು ಅಂಕ’ವನ್ನೂ ಪರಿಗಣಿಸುವ ‘ವಿದ್ಯಾರ್ಥಿ ಸ್ನೇಹಿ’ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಈ ಸಂಬಂಧ ಶೀಘ್ರದಲ್ಲೇ ‘ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು-1997’ಕ್ಕೆ ತಿದ್ದುಪಡಿ ತರಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com