ಮಹಿಳೆಯೊಂದಿಗೆ ಅನುಚಿತವಾಗಿ ವರ್ತನೆ; ಇಬ್ಬರು ಯುವಕರ ತಲೆ ಬೋಳಿಸಿ ಮೆರವಣಿಗೆ; 7 ಮಂದಿ ಬಂಧನ

ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ಯುವಕರಿಗೆ ತಲೆ ಬೋಳಿಸಿದ್ದಾರೆ ಮತ್ತು ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಏಳು ಮಂದಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಿಜಯಪುರ: ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ಯುವಕರಿಗೆ ತಲೆ ಬೋಳಿಸಿದ್ದಾರೆ ಮತ್ತು ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಏಳು ಮಂದಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ವಿಜಯಪುರ ತಾಲೂಕಿನ ಹೆಗಡಿಹಾಳ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಯುವಕರು ಮುಂಬೈನಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಯುವಕ ಮತ್ತು ಮಹಿಳೆ ವಲಸೆ ಕಾರ್ಮಿಕರಾಗಿ ಮುಂಬೈಗೆ ಹೋಗಿ ಅಲ್ಲಿ ಕೆಲಸ ಮಾಡುತ್ತಿದ್ದರು.

ಯುವಕರ ಅನುಚಿತ ವರ್ತನೆಯ ಬಗ್ಗೆ ಮಹಿಳೆ ತನ್ನ ಪೋಷಕರು ಮತ್ತು ಕುಟುಂಬಕ್ಕೆ ದೂರು ನೀಡಿದ್ದಳು. ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕರನ್ನು ಸಮುದಾಯದ ಹಿರಿಯರು ಮುಂಬೈನಿಂದ ತಮ್ಮ ಗ್ರಾಮಕ್ಕೆ ಕರೆಸಿಕೊಂಡಿದ್ದಾರೆ. ಸಭೆ ನಡೆಸಿ ಅವರ ತಲೆ ಬೋಳಿಸಿ ಮತ್ತು ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಲು ನಿರ್ಧರಿಸಿದ್ದಾರೆ.

ಈ ಸುದ್ದಿ ವಿವಾದವನ್ನು ಹುಟ್ಟುಹಾಕಿತು ಮತ್ತು ಕಾನೂನನ್ನು ಕೈಗೆತ್ತಿಕೊಂಡ ಬಗ್ಗೆ ಗ್ರಾಮಸ್ಥರನ್ನು ಪೊಲೀಸರು ಪ್ರಶ್ನಿಸಿದರು.

ವಿಜಯಪುರ ಗ್ರಾಮಾಂತರ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಚಾರಣೆ ಬಳಿಕ ಲಂಬಾಣಿ ಸಮುದಾಯಕ್ಕೆ ಸೇರಿದ ಗ್ರಾಮದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರು ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com