ಬಿಡಿಎ ಮೇಲೆ ಲೋಕಾಯುಕ್ತ ದಾಳಿ: ಮೂವರ ಬಂಧನ, ದೂರುಗಳ ಸ್ವೀಕಾರಕ್ಕೆ ವಿಶೇಷ ಕೌಂಟರ್ ವ್ಯವಸ್ಥೆ

ಬಿಡಿಎನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದರ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ಬಿಡಿಎ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಮೂವರನ್ನು ಬಂಧಿಸಲಾಗಿದೆ ಹಾಗೂ ಹಲವು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.
ಬಿಡಿಎ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಬಿಡಿಎ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬಿಡಿಎನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದರ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ಬಿಡಿಎ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಮೂವರನ್ನು ಬಂಧಿಸಲಾಗಿದೆ ಹಾಗೂ ಹಲವು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. 

ಅಭೂತಪೂರ್ವ ಹೆಜ್ಜೆಯೊಂದರಲ್ಲಿ ಲೋಕಾಯುಕ್ತ ಸಂಸ್ಥೆ ಬಿಡಿಎ ವಿರುದ್ಧದ ದೂರುಗಳನ್ನು ಸಾರ್ವಜನಿಕರಿಂದ ಸ್ವೀಕರಿಸುವುದಕ್ಕೆ ವಿಶೇಷ ಕೌಂಟರ್ ಒಂದನ್ನು ಸ್ಥಾಪಿಸಿದೆ.
 
ಲೋಕಾಯುಕ್ತ ಎಸ್ ಪಿ ಅಶೋಕ್ ನೇತೃತ್ವದಲ್ಲಿನ ಆರು ತಂಡ ದಾಳಿ ನಡೆದಿದೆ. 

ವಿವಿಧ ಲೇಔಟ್ ಗಳಲ್ಲಿ ಸೈಟ್ ಗಳ ಹಂಚಿಕೆ ಹಾಗೂ ಇನ್ನೂ ಹಲವಾರು ಅಕ್ರಮಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿದ್ದೇವೆ. ಇತ್ತೀಚಿಗೆ ಬಿಡಿಎ ಇಂಜಿನಿಯರ್ ಗಳು ನಾಡಪ್ರಭು ಕೆಂಪೇಗೌಡ ಲೇಔಟ್ ನಲ್ಲಿ ನಾಗರಿಕ ಸೌಕರ್ಯ ಸೈಟ್ ಗಳನ್ನು ಅಕ್ರಮವಾಗಿ ಮಾರಾಟ ಮಾಡಿರುವ ಹಗರಣ ಪತ್ತೆಯಾಗಿದ್ದು, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. 

ನಗರ ಯೋಜನಾ ಇಲಾಖೆ, ಆಯುಕ್ತರ ಕಾರ್ಯದರ್ಶಿ ಮತ್ತು ವೈಯಕ್ತಿಕ ವಿಭಾಗದ ಕಚೇರಿಗಳನ್ನು ಲೋಕಾಯುಕ್ತ ತಂಡಗಳು ದಾಳಿ ನಡೆಸಿವೆ. ಬಿಡಿಎ ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ, ಕಚೇರಿಯ ಬಳಿ ಸುತ್ತಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿ ಅಶೋಕ್ ತಿಳಿಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಕಾರ್ನರ್ ನಿವೇಷನಗಳ  ಮಾರಾಟದಲ್ಲಿ ನಡೆದಿರುವ ಹಗರಣಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
 
ನಾಪತ್ತೆಯಾಗಿರುವ ದಾಖಲೆಗಳನ್ನು ಸಂಗ್ರಹಿಸಲು ಕ್ಲಾಸ್ ಡಿ ಸಿಬ್ಬಂದಿಗಳನ್ನು ಇಲಾಖೆಗಳಾದ್ಯಂತ ಕಳಿಸಲಾಗಿತ್ತು.

ಲೋಕಾಯುಕ್ತ ದಾಳಿ ವೇಳೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ದೂರು ನೀಡುವ ಲೋಕಾಯುಕ್ತ ಅಧಿಕಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com