ಬೆಂಗಳೂರಿನಲ್ಲಿ ಶಂಕಿತ ಉಗ್ರ ಆರೀಫ್ ಬಂಧನ: ಆಲ್ ಖೈದಾ ಜೊತೆ ನಿಕಟ ಸಂಪರ್ಕ ಹೊಂದಿರುವ ಶಂಕೆ

ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕ ಆರೀಫ್ ನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಸಾಫ್ಟ್ ವೇರ್ ಇಂಜಿನಿಯರ್ ಎಂದು ತಿಳಿದುಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕ ಆರೀಫ್ ನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಸಾಫ್ಟ್ ವೇರ್ ಇಂಜಿನಿಯರ್ ಎಂದು ತಿಳಿದುಬಂದಿದೆ. ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ನಡೆದ ಕಾರ್ಯಾಚರಣೆಯಲ್ಲಿ ಎನ್ ಐಎ(National investigation agency) ಐಎಸ್ ಡಿ ಜೊತೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. 

ಥಣಿಸಂದ್ರದಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ  ಆಂತರಿಕ ಭದ್ರತಾ ಪಡೆ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ. ಈತ ಟೆಲಿಗ್ರಾಂ ಆಲ್ ಖೈದಾ ಗ್ರೂಪ್ ನಲ್ಲಿ ಬಹಳ ಸಕ್ರಿಯನಾಗಿದ್ದ ಎಂದು ತಿಳಿದುಬಂದಿದೆ. 

ಇದೀಗ ಶಂಕಿತ ಭಯೋತ್ಪಾದಕನನ್ನು ತೀವ್ರ  ವಿಚಾರಣೆಗೆ ಗುರಿಪಡಿಸಲಾಗಿದೆ. ಕೇಂದ್ರ ಗುಪ್ತಚರ ಸಂಸ್ಥೆಗಳು ಕೂಡ ಈ ಕಾರ್ಯಾಚರಣೆಗೆ ನೆರವು ನೀಡಿವೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕಂಪೆನಿಗೆ ಉಗ್ರ ವರ್ಕ್ ಫ್ರಂ ಹೋಂ ಮಾಡುತ್ತಿದ್ದ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com