Tiger Attack in Kodagu: ಕೊಡಗಿನಲ್ಲಿ ಹುಲಿ ದಾಳಿಗೆ 12 ವರ್ಷದ ಬಾಲಕ ಸಾವು

ಹುಲಿ ದಾಳಿಗೆ 12 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕೊಡಗಿನಲ್ಲಿ ಭಾನುವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಡಗು: ಹುಲಿ ದಾಳಿಗೆ 12 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕೊಡಗಿನಲ್ಲಿ ಭಾನುವಾರ ನಡೆದಿದೆ.

ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 12 ವರ್ಷದ ಬಾಲಕನ ಮೇಲೆ ಹುಲಿ ದಾಳಿ (Tiger Attack) ಮಾಡಿದೆ. 

ಹುಲಿ ದಾಳಿಯಿಂದಾಗಿ ಸ್ಥಳದಲ್ಲೇ ಬಾಲಕ ಸಾವನ್ನಪ್ಪಿದ್ದು, ಮೃತ ಬಾಲಕನನ್ನು ಚೇತನ್ (12 ವರ್ಷ) ಎಂದು ಗುರುತಿಸಲಾಗಿದೆ. ದಾಳಿ ಮಾಡಿದ ಹುಲಿ ಬಾಲಕನನ್ನು ಕೊಂದು ತೊಡೆ ಭಾಗವನ್ನು ತಿಂದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಸಂಜೆ ಎಸ್ಟೇಟ್ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿರಾಜಪೇಟೆ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಶವವನ್ನು ಗೋಣಿಕೊಪ್ಪಲು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಯ ನಂತರ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com