ಜೈನ್ ವಿವಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತ ಸ್ಕಿಟ್ ನಲ್ಲಿ ಅವಮಾನ; ವರದಿ ನೀಡಲು ಉನ್ನತ ಶಿಕ್ಷಣ ಸಚಿವರ ಸೂಚನೆ

ನಗರದ ಜೈನ್ ವಿಶ್ವವಿದ್ಯಾಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಕುರಿತು ಪ್ರದರ್ಶಿಸಿದ ಕಿರುನಾಟಕ ವಿವಾದಾಸ್ಪದವಾಗಿರುವ ಹಿನ್ನೆಲೆಯಲ್ಲಿ, ಸೂಕ್ತ ತನಿಖೆ ನಡೆಸಿ  ವರದಿ ಸಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸಾಂದರ್ಭಿಕ ಚಿತ್ರ
ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದ ಜೈನ್ ವಿಶ್ವವಿದ್ಯಾಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಕುರಿತು ಪ್ರದರ್ಶಿಸಿದ ಕಿರುನಾಟಕ ವಿವಾದಾಸ್ಪದವಾಗಿರುವ ಹಿನ್ನೆಲೆಯಲ್ಲಿ, ಸೂಕ್ತ ತನಿಖೆ ನಡೆಸಿ  ವರದಿ ಸಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, "ಜೈನ್ ಕಾಲೇಜಿನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಘಟನೆ ದುರದೃಷ್ಟಕರ. ಬಾಬಾಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿಗಳಾಗಿದ್ದಾರೆ. ಅವರನ್ನು ಇಡೀ ಜಗತ್ತೇ ಗೌರವಿಸುತ್ತಿದೆ. ಅಂಥವರನ್ನು ಅಪಮಾನಿಸಿದ್ದರೆ ಅದನ್ನು ಒಪ್ಪುವುದು ಸಾಧ್ಯವಿಲ್ಲ ಎಂದಿದ್ದಾರೆ.

ಘಟನೆಯ ಬಗ್ಗೆ ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಗಮನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರವೇ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ಕೊಡಲಾಗಿದೆ. ಅವರು ಸದ್ಯದಲ್ಲೇ ವರದಿ ಕೊಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಏನಿದು ವಿವಾದ: ವಿವಾದಾತ್ಮಕ ವಿಡಿಯೋದಲ್ಲಿ ತಳ ಸಮುದಾಯದ ವ್ಯಕ್ತಿಯೊಬ್ಬ ಮೇಲ್ವರ್ಗದ ಮಹಿಳೆಯೊಂದಿಗೆ ಡೇಟಿಂಗ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಕಿರು ನಾಟಕದಲ್ಲಿ ಪ್ರದರ್ಶಿಸಲಾಗಿದೆ. ಇದೇ ವೇಳೆ ಆತ ತಾನು ದಲಿತ ಎಂದು ಹೇಳಿಕೊಳ್ಳುವ ಸನ್ನಿವೇಶ ಬರುತ್ತದೆ. ಆಗ ಡೋಂಟ್ ಟಚ್ ಮಿ, ಟಚ್ ಮಿ ಎಂಬ ಹಾಡನ್ನು ಹಾಕಿರುವುದು ಕಂಡುಬಂದಿದೆ. ಹಾಗೆಯೇ ಈ ನಾಟಕದಲ್ಲಿ ಬಿ.ಆರ್. ಅಂಬೇಡ್ಕರ್ ಅವರನ್ನು ಬಿಯರ್ ಅಂಬೇಡ್ಕರ್ ಎಂದು ಅವಹೇಳನ ಮಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಸ್ಕಿಟ್ ನಲ್ಲಿ ಭಾಗಿಯಾಗಿರುವವರು, ಸ್ಕಿಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ವಿವಿ ವಿದ್ಯಾರ್ಥಿಗಳು ಹೋರಾಟಕ್ಕೆ ಕರೆ ನೀಡಿದ್ದಾರೆ.  ಈ  ರೀತಿಯ ಘಟನೆ ಅತ್ಯಂತ ಖಂಡನೀಯ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com