ಮಂಗಳೂರು: ಈಜಲು ತೆರಳಿದ್ದ ವೇಳೆ ಪಯಸ್ವಿನಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಪಯಸ್ವಿನಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ಭಾನುವಾರ ತಿಳಿಸಿವೆ.
Published: 12th February 2023 10:44 AM | Last Updated: 12th February 2023 10:44 AM | A+A A-

ಪ್ರಾತಿನಿಧಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಪಯಸ್ವಿನಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ಭಾನುವಾರ ತಿಳಿಸಿವೆ.
ಮೃತರು ಪುತ್ತೂರಿನವರು. ಆರು ಯುವಕರು ಈಜಲು ಗುಂಪಿನಲ್ಲಿ ಬಂದಿದ್ದರು ಎಂದು ಮೂಲಗಳು ತಿಳಿಸಿವೆ.
ಮೊದಲು ಹೋದವರಲ್ಲಿ ಒಬ್ಬರು ಸುಳಿಗೆ ಸಿಲುಕಿದ್ದಾರೆ ಮತ್ತು ಇತರರು ಆತನನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ನಾಲ್ವರು ದಡ ತಲುಪಲು ಯಶಸ್ವಿಯಾಗಿದ್ದು, ಇಬ್ಬರು ನೀರಿನಲ್ಲಿ ಮುಳುಗಿದ್ದಾರೆ.
ಸ್ಥಳೀಯ ಯುವಕರು ಇಬ್ಬರು ಯುವಕರ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ. ಎಲ್ಲಾ ಆರು ಯುವಕರು ದಿನಗೂಲಿ ಕಾರ್ಮಿಕರು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.