ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ SDPI ನಿಂದ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಕಣಕ್ಕೆ!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ಶಾಫಿ ಬೆಳ್ಳಾರೆಯನ್ನು ಕಣಕ್ಕಿಳಿಸಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಮುಂದಾಗಿದೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ SDPI ನಿಂದ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಕಣಕ್ಕೆ!

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ಶಾಫಿ ಬೆಳ್ಳಾರೆಯನ್ನು ಕಣಕ್ಕಿಳಿಸಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಮುಂದಾಗಿದೆ. 

ಎಸ್‌ಡಿಪಿಐನ ಈ ನಿರ್ಧಾರವನ್ನು ಪ್ರವೀಣ್ ನೆಟ್ಟಾರು ಕುಟುಂಬ ಮತ್ತು ಹಿಂದುತ್ವವಾದಿ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಇನ್ನು ವಿಧಾನಸಭಾ ಚುನಾವಣೆಗೆ ಎಸ್‌ಡಿಪಿಐ ಸಿದ್ಧತೆ ನಡೆಸಿದ್ದು, ದಕ್ಷಿಣ ಕನ್ನಡದ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿತ್ತು.

ಕಳೆದ ಶುಕ್ರವಾರ ಪುತ್ತೂರಿನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಪುತ್ತೂರು ಕ್ಷೇತ್ರದಿಂದ ಎಸ್‌ಡಿಪಿಐ ರಾಜ್ಯ ಘಟಕದ ಕಾರ್ಯದರ್ಶಿ ಶಾಫಿ ಬೆಳ್ಳಾರೆ ತಮ್ಮ ಅಭ್ಯರ್ಥಿ ಎಂದು ಘೋಷಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಶಾಫಿ ಬೆಳ್ಳಾರೆ ಎಂಬಾತನನ್ನು ಕಳೆದ ನವೆಂಬರ್ 5ರಂದು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ನೆಟ್ಟಾರು ಹತ್ಯೆಯ ಸಂಚಿನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಕ್ಕಾಗಿ ಬಂಧಿಸಿದ್ದು ಆತ ಪ್ರಸ್ತುತ ಜೈಲಿನಲ್ಲಿದ್ದಾನೆ.

ಪ್ರವೀಣ್ ನೆಟ್ಟಾರು ಅವರನ್ನು ಕಳೆದ ಜುಲೈ 26ರಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು/ಸದಸ್ಯರು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಶಫಿ ಬೆಳ್ಳಾರೆ ಸೇರಿದಂತೆ 20 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಸಮಾಜದಲ್ಲಿ ಭಯ ಹುಟ್ಟಿಸುವ ಹಾಗೂ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಕೊಲೆ ಮಾಡಲಾಗಿತ್ತು ಎಂದು ಶಫಿ ಸೇರಿದಂತೆ ಆರೋಪಿಗಳ ವಿರುದ್ಧ ಐಪಿಸಿಯ 120 ಬಿ, 153 ಎ, 302 ಮತ್ತು 34 ರ ವಿವಿಧ ಸೆಕ್ಷನ್‌ಗಳು ಮತ್ತು ಯುಎ (ಪಿ) ಆಕ್ಟ್, 1967, ಸೆಕ್ಷನ್ 25 (1) (ಎ) ಸೆಕ್ಷನ್ 16, 18 ಮತ್ತು 20 ರ ಅಡಿಯಲ್ಲಿ ಚಾರ್ಜ್ ಶೀಟ್ ಮಾಡಲಾಗಿದೆ.

ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅತ್ತಾವುಲ್ಲಾ ಜೋಕಟ್ಟೆ ಮಾತನಾಡಿ, ಆರು ತಿಂಗಳ ಹಿಂದೆಯೇ ಪುತ್ತೂರಿನಿಂದ ಶಾಫಿ ಬೆಳ್ಳಾರೆ ಅವರನ್ನು ಕಣಕ್ಕಿಳಿಸಲು ಪಕ್ಷ ಚಿಂತನೆ ನಡೆಸಿತ್ತು. 'ಆದರೆ, ನೆಟ್ಟಾರು ಪ್ರಕರಣದಲ್ಲಿ ಅವರು ಬಂಧನಕ್ಕೊಳಗಾದರು, ಈಗ, ಪಕ್ಷದ ಅಧ್ಯಕ್ಷರು ಶಫಿ ಅಭ್ಯರ್ಥಿಯ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ ಎಂದು ಹೇಳಿದರು. ಆದರೆ, ಶಫಿ ಕಣಕ್ಕಿಳಿಯುತ್ತಿರುವ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ. 

ಮಗನ ಹತ್ಯೆ ಆರೋಪಿ ಶಫಿಗೆ ವಿಧಾನಸಭಾ ಚುನಾವಣೆಯಲ್ಲಿ ಅವಕಾಶ ನೀಡಬಾರದು ಎಂದು ಪ್ರವೀಣ್ ನೆಟ್ಟಾರು ಪೋಷಕರು ಆಗ್ರಹಿಸಿದ್ದಾರೆ. ಶಫಿಗೆ ಸ್ಪರ್ಧಿಸಲು ಅವಕಾಶ ನೀಡಿದರೆ, ಅವನು ಇನ್ನಷ್ಟು ಜನರನ್ನು ಕೊಲ್ಲಬಹುದು ಮತ್ತು ನಾವು ನಮ್ಮ ಮನೆಯಿಂದ ಹೊರಬರಲು ಸಾಧ್ಯವಾಗುವುದಿಲ್ಲ ಎಂದು ಅವರು ಹೇಳಿದರು. ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕೂಡ ಎಸ್‌ಡಿಪಿಐ ಬೆಳ್ಳಾರೆ ಅಭ್ಯರ್ಥಿಯ ನಿರ್ಧಾರವನ್ನು ಖಂಡಿಸಿದ್ದು, ಈ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com