ಬೆಂಗಳೂರು: ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿಗೆ ಇಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ಹುಲಿ ಹಿಡಿಯಲು ವಿಫಲವಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಶಾಸಕರು ಆಗ್ರಹಿಸಿದರು.
ಸೋಮವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರು, ‘ಒಂದು ಬಾರಿ ಈ ಹುಲಿಗಳು ಮನುಷ್ಯರ ಮಾಂಸ ತಿನ್ನಲು ಅಭ್ಯಾಸ ಮಾಡಿಕೊಂಡರೆ ಅವು ಹೆಚ್ಚಾಗಿ ಮನುಷ್ಯರ ಆವಾಸಸ್ಥಾನಗಳಿಗೆ ನುಗ್ಗುತ್ತವೆ’ ಎಂದು ಹೇಳಿದರು.
ಅರಣ್ಯ ಇಲಾಖೆ ಅಧಿಕಾರಿಗಳು ಎಷ್ಟು ಬೇಜವಾಬ್ದಾರಿ ಹೊಂದಿದ್ದಾರೆ ಎಂಬುದನ್ನು ಈ ಘಟನೆ ತೋರಿಸುತ್ತದೆ. ಕೂಡಲೇ ಸಂಬಂಧಪಟ್ಟಂತಹ ಅರಣ್ಯಾಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.
ಹುಣಸೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಪಿ.ಮಂಜುನಾಥ್ ಮಾತನಾಡಿ, ಈ ಹುಲಿ ಸಮಸ್ಯೆ ನಮ್ಮ ಕ್ಷೇತ್ರದಲ್ಲಿ ಹೆಚ್ಚಾಗಿದೆ. ಅಂತಹ ಘಟನೆಗಳ ನಂತರ, ನಾವು ಪರಿಹಾರವನ್ನು ನೀಡುತ್ತೇವೆ, ಆದರೆ ಕುಟುಂಬಗಳಿಗೆ ಸ್ಥಿತಿ ಏನಾಗುತ್ತದೆ ಎಂಬುದನ್ನು ಯೋಜಿಸುವುದಿಲ್ಲ. ಈ ಎರಡು ಸಾವಿನ ಸುದ್ದಿ ಕೇಳಿ ಆಘಾತದಿಂದ ಕುಟುಂಬದಲ್ಲಿ ಮತ್ತೊಂದು ಸಾವು ಸಂಭವಿಸಿದೆ ಎಂದು ಹೇಳಿದರು.
Advertisement