ಎಸ್‌ಸಿ/ಎಸ್‌ಟಿ ಕಾಯ್ದೆ: ಒಮ್ಮೆಯೂ ಸಭೆ ನಡೆಸದ ಸಿಎಂ ನೇತೃತ್ವದ ಸಮಿತಿಯನ್ನು ತರಾಟೆಗೆ ತೆಗೆದುಕೊಂಡ ಕರ್ನಾಟಕ ಹೈಕೋರ್ಟ್

2022 ರಲ್ಲಿ ರಚಿಸಿದ್ದ ಮುಖ್ಯಮಂತ್ರಿ ನೇತೃತ್ವದ ಹೈಪವರ್ ವಿಜಿಲೆನ್ಸ್ ಮತ್ತು ಮಾನಿಟರಿಂಗ್ ಸಮಿತಿಯ ಒಂದು ಸಭೆಯನ್ನು ನಡೆಸಲು ವಿಫಲವಾದ ಕಾರಣಕ್ಕಾಗಿ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989ರ ನಿಬಂಧನೆಗಳ ಪರಿಣಾಮಕಾರಿ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು 2022 ರಲ್ಲಿ ರಚಿಸಿದ್ದ ಮುಖ್ಯಮಂತ್ರಿ ನೇತೃತ್ವದ ಹೈಪವರ್ ವಿಜಿಲೆನ್ಸ್ ಮತ್ತು ಮಾನಿಟರಿಂಗ್ ಸಮಿತಿಯ ಒಂದು ಸಭೆಯನ್ನು ನಡೆಸಲು ವಿಫಲವಾದ ಕಾರಣಕ್ಕಾಗಿ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.

ಕಾಯ್ದೆಯ ನಿಯಮ 16ರ ಪ್ರಕಾರ, ಒಂದು ವರ್ಷದಲ್ಲಿ ಕನಿಷ್ಠ ಎರಡು ಸಭೆಗಳನ್ನಾದರೂ ನಡೆಸಬೇಕು.

ವರ್ಷವೊಂದರಲ್ಲಿ ಕನಿಷ್ಠ ಎರಡು ಶಾಸನಬದ್ಧ ಸಭೆಗಳನ್ನು ನಡೆಸಬೇಕೆಂದು ಕಾಯ್ದೆ ಹೇಳಿರುವಾಗ, ರಾಜ್ಯ ಸರ್ಕಾರ ಮೂಕ ಪ್ರೇಕ್ಷಕರಾಗಲು ಸಾಧ್ಯವಿಲ್ಲ. ಒಂದು ವರ್ಷದಲ್ಲಿ ಒಂದೇ ಒಂದು ಸಭೆ ನಡೆಸದಿರುವುದು ಖಂಡಿತವಾಗಿಯೂ ಈ ನ್ಯಾಯಾಲಯಕ್ಕೆ ನೀಡಿದ ಭರವಸೆಯನ್ನು ಪಾಲಿಸಿದಂತಾಗುವುದಿಲ್ಲ. ಭವಿಷ್ಯದಲ್ಲಿ ರಾಜ್ಯ ಸರ್ಕಾರವು ಈ ರೀತಿ ಮಾಡುವುದಿಲ್ಲ ಮತ್ತು ದೌರ್ಜನ್ಯ ತಡೆ ಕಾಯ್ದೆ ಮತ್ತು ನಿಯಮಗಳ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಮುಖ್ಯ ನ್ಯಾಯೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ವಿಭಾಗೀಯ ಪೀಠ ಹೇಳಿದೆ. 

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನಾ ಸಂಘ ಮತ್ತು ವಕೀಲ ಎಸ್ ಉಮಾಪತಿ ಅವರು ಸಲ್ಲಿಸಿರುವ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

ಜನವರಿ ಮತ್ತು ಜುಲೈನಲ್ಲಿ ಎರಡು ಸಭೆಗಳನ್ನು ನಡೆಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, 2021ರಲ್ಲಿ ರಾಜ್ಯ ಸರ್ಕಾರವು ಒಂದೇ ಒಂದು ಸಭೆ ಕರೆದಿದ್ದು, 2022 ಹಾಗೂ 2023ರಲ್ಲಿ ಇದುವರೆಗೆ ಯಾವುದೇ ಸಭೆ ನಡೆಸಿಲ್ಲ. 

ಕಾಯ್ದೆ ಮತ್ತು ನಿಯಮಗಳ ಶಾಸನಬದ್ಧ ನಿಬಂಧನೆಗಳನ್ನು ನಿರ್ಲಕ್ಷಿಸಿ, ತನಗೆ ಬೇಕಾದಂತೆ ಸಭೆಯನ್ನು ನಡೆಸುತ್ತಿದೆ ಮತ್ತು ಕರೆಯುತ್ತಿದೆ ಎಂಬ ರಾಜ್ಯ ಸರ್ಕಾರದ ಧೋರಣೆಯು ಸ್ಪಷ್ಟವಾಗಿ ಕಾಣಿಸಿದೆ ಎಂದು ನ್ಯಾಯಾಲಯವು ಗಮನಸೆಳೆದಿದೆ.

ನಮ್ಮ ಅಭಿಪ್ರಾಯದಲ್ಲಿ, ಅಧಿಕಾರಿಗಳು ದೌರ್ಜನ್ಯ ಮತ್ತು ಇತರ ಸಮಸ್ಯೆಗಳ ಪ್ರಕರಣಗಳಲ್ಲಿ ಪರಿಹಾರ ಪಾವತಿಗೆ ಸಂಬಂಧಿಸಿದಂತೆ ಕಾಯ್ದೆಯ ನಿಬಂಧನೆಗಳನ್ನು ಅನುಸರಿಸುತ್ತಿದ್ದಾರೆ ಎಂದು ತೋರಿಸಲು ತರಾತುರಿಯಲ್ಲಿ ಚಾರ್ಟ್ ಅನ್ನು ಸಿದ್ಧಪಡಿಸಿದ್ದಾರೆ. ಈ ಚಾರ್ಟ್, ಪ್ರಶ್ನೆಗಳಿಗೆ ಉತ್ತರಿಸುವ ಬದಲು ಹೆಚ್ಚಿನ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದ ನ್ಯಾಯಾಲಯ, ಸರಿಯಾದ ಪ್ರತಿಕ್ರಿಯೆಯನ್ನು ಸಲ್ಲಿಸಲು ಸರ್ಕಾರಕ್ಕೆ ಸಮಯ ನೀಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com