ಕೊಪ್ಪಳ: ಡಿವೈಡರ್ ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರ ದುರ್ಮರಣ
ವೇಗವಾಗಿ ಬಂದ ಕಾರೊಂದು ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸೇತುವೆಯ ಗೋಡೆಗೆ ಗುದ್ದಿದ್ದು ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Published: 16th February 2023 06:11 PM | Last Updated: 16th February 2023 06:53 PM | A+A A-

ಅಪಘಾತದ ಭೀಕರ ದೃಶ್ಯ
ಕೊಪ್ಪಳ: ವೇಗವಾಗಿ ಬಂದ ಕಾರೊಂದು ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸೇತುವೆಯ ಗೋಡೆಗೆ ಗುದ್ದಿದ್ದು ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಭೀಕರ ಅಪಘಾದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಮೃತರು ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರಾಗಿದ್ದು ಇವರೆಲ್ಲರೂ ಹೈದ್ರಾಬಾದ್ ಮೂಲದವರು ಎಂದು ಗೊತ್ತಾಗಿದೆ.
ಮೃತಪಟ್ಟವರ ಹೆಸರು ಹಾಗೂ ವಿಳಾಸಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಕುಕನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಕಲಬುರಗಿ: ಮಲಗಿದ್ದ ಪತ್ನಿಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಂದ ಪತಿ
ಕೊಪ್ಪಳ ಮಾರ್ಗವಾಗಿ ಗದಗ ಕಡೆಗೆ ತೆರಳುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಗೋಡೆಗೆ ಗುದ್ದಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.