ಗುತ್ತಿಗೆದಾರ ಕೆಂಪಣ್ಣಗೆ ಬೆಂಗಳೂರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನೀಡಿದ್ದ ಸಮನ್ಸ್ ರದ್ದುಗೊಳಿಸಿದ ಕೋರ್ಟ್

ತೋಟಗಾರಿಕಾ ಸಚಿವ ಮುನಿರತ್ನ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರಿನ ಮೇರೆಗೆ ಬೆಂಗಳೂರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೆಂಪಣ್ಣ ಮತ್ತು ಗುತ್ತಿಗೆದಾರರ ಸಂಘದ ಇತರರಿಗೆ ನೀಡಿದ್ದ ಸಮನ್ಸ್ ಅನ್ನು ಬೆಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ರದ್ದುಗೊಳಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ತೋಟಗಾರಿಕಾ ಸಚಿವ ಮುನಿರತ್ನ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರಿನ ಮೇರೆಗೆ ಬೆಂಗಳೂರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೆಂಪಣ್ಣ ಮತ್ತು ಗುತ್ತಿಗೆದಾರರ ಸಂಘದ ಇತರರಿಗೆ ನೀಡಿದ್ದ ಸಮನ್ಸ್ ಅನ್ನು ಬೆಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ರದ್ದುಗೊಳಿಸಿದೆ.

ಕೆಂಪಣ್ಣ ಮತ್ತು ಗುತ್ತಿಗೆದಾರರ ಪರ ವಕೀಲ ಕೆವಿ ಧನಂಜಯ್ ಮತ್ತು ಅವರ ತಂಡ ವಾದ ಮಂಡಿಸಿದ್ದು, ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರು ಮುನಿರತ್ನ ಪರ ವಾದ ಮಂಡಿಸಿದ್ದರು. ಕೆಂಪಣ್ಣ ಮತ್ತು ಗುತ್ತಿಗೆದಾರರು ಸರ್ಕಾರದ ವಿರುದ್ಧ  40% ಕಮಿಷನ್ ಆರೋಪ ಮಾಡಿದ್ದರು. ನಂತರ ಮುನಿರತ್ನ ಅವರು ಕೆಂಪಣ್ಣ ವಿರುದ್ಧ ಕ್ರಿಮಿನಲ್ ಮಾನನಷ್ಟ ದೂರು ದಾಖಲಿಸಿದರು.

ನ್ಯಾಯಾಧೀಶರು 2022ರ ನವೆಂಬರ್ 16 ರಂದು ಎಲ್ಲಾ ಆರೋಪಿಗಳಿಗೆ ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ನೀಡಿದ್ದರು. ಕೆಂಪಣ್ಣ ಅವರು ತನ್ನ ಮತ್ತು ಇತರರಿಗೆ ನೀಡಲಾದ ಸಮನ್ಸ್ ವಿರುದ್ಧ ಪರಿಷ್ಕರಣೆ ಮಾಡುವಂತೆ ಮೂರು ವಾರಗಳ ಹಿಂದೆ ಬೆಂಗಳೂರಿನ ಸೆಷನ್ಸ್ ನ್ಯಾಯಾಧೀಶರನ್ನು ಸಂಪರ್ಕಿಸಿದ್ದರು.

ಎರಡೂ ಕಡೆಯ ವಾದವನ್ನು ಆಲಿಸಿದ ಬೆಂಗಳೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎನ್.ಕೃಷ್ಣಯ್ಯ ಅವರು ಸಮನ್ಸ್ ರದ್ದುಪಡಿಸಿದರು. 'ಮುನಿರತ್ನ ಅವರು ಸಾಕ್ಷಿಗಳ ಪಟ್ಟಿಯನ್ನು ನೀಡಲು ಮುಕ್ತರಾಗಿದ್ದಾರೆ ಮತ್ತು ಅಂತಹ ಪಟ್ಟಿಯನ್ನು ಒದಗಿಸಿದ ನಂತರ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕಾನೂನಿನ ಪ್ರಕಾರ ಮುಂದುವರಿಯಲು ಸ್ವಾತಂತ್ರ್ಯವನ್ನು ಹೊಂದಿದೆ' ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com