ಕರ್ನಾಟಕ ಬಜೆಟ್ 2023: ವೃತ್ತಿಪರ ತೆರಿಗೆ ವಿನಾಯಿತಿ ಮಿತಿ 15 ರಿಂದ 25 ಸಾವಿರ ರೂ. ಗೆ ಏರಿಕೆ

ಕಡಿಮೆ ಆದಾಯದವರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವೃತ್ತಿಪರ ತೆರಿಗೆ (Profession Tax) ಯನ್ನು 15 ಸಾವಿರದಿಂದ 25 ಸಾವಿರಕ್ಕೆ ಏರಿಕೆ ಮಾಡಿರುವುದಾಗಿ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ. 
ವೃತ್ತಿಪರ ತೆರಿಗೆ (ಸಾಂಕೇತಿಕ ಚಿತ್ರ)
ವೃತ್ತಿಪರ ತೆರಿಗೆ (ಸಾಂಕೇತಿಕ ಚಿತ್ರ)

ಬೆಂಗಳೂರು: ಕಡಿಮೆ ಆದಾಯದವರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವೃತ್ತಿಪರ ತೆರಿಗೆ (Profession Tax) ಯನ್ನು 15 ಸಾವಿರದಿಂದ 25 ಸಾವಿರಕ್ಕೆ ಏರಿಕೆ ಮಾಡಿರುವುದಾಗಿ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ. 

ವೃತ್ತಿಪರ ತೆರಿಗೆ ವಿನಾಯಿತಿ ಮಿತಿ ಏರಿಕೆಯಿಂದಾಗಿ ಕಡಿಮೆ ವರಮಾನದ ವರ್ಗಕ್ಕೆ ಅನುಕೂಲವಾಗಲಿದೆ ಎಂದು ಸಿಎಂ ಹೇಳಿದ್ದಾರೆ.

25 ಸಾವಿರಕ್ಕಿಂತ ಕಡಿಮೆ ಸಂಬಳ ಪಡೆಯುವವರಿಂದ ವೃತ್ತಿಪರ ತೆರಿಗೆ ಪಡೆಯಲಾಗುವುದಿಲ್ಲ. 25 ಸಾವಿರ ರೂಗಿಂತ ಹೆಚ್ಚು ಸಂಬಳ ಪಡೆಯುವವರು 200 ರೂ ವೃತ್ತಿ ತೆರಿಗೆ ಪಾವತಿಸಬೇಕಾಗುತ್ತದೆ.

ತೆರಿಗೆ ಕುರಿತು ಬಜೆಟ್ ನಲ್ಲಿ ಪ್ರಸ್ತಾಪವಾದ ಅಂಶಗಳು ಹೀಗಿವೆ... 

ರಾಜ್ಯದಲ್ಲಿ ಜಿಎಸ್​ಟಿ ಸಂಗ್ರಹ ಗಣನೀಯವಾಗಿ ಹೆಚ್ಚಿದೆ. 2022-23ರ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ಸಿಗುವ ಜಿಎಸ್​ಟಿ ಪರಿಹಾರ ಸೇರಿ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹವು 93,558 ಕೋಟಿ ರೂ ಎಂದು ಅಂದಾಜು ಮಾಡಲಾಗಿದೆ. ವಾಣಿಜ್ಯ ತೆರಿಗೆ ಇಲಾಖೆಯು ಜಿಎಸ್​ಟಿ ಪರಿಹಾರ ಹೊರತುಪಡಿಸಿ 72,010 ಕೋಟಿ ರೂ ಗುರಿ ಹೊಂದಿತ್ತು. ಇದನ್ನು ಮೀರಿ 83,010 ಕೋಟಿ ರೂ ಸಂಗ್ರಹ ಮಾಡಲಾಗುತ್ತಿದೆ. ಕೇಂದ್ರದಿಂದ ಜಿಎಸ್​ಟಿ ಪರಿಹಾರವಾಗಿ 10,548 ಕೋಟಿ ರೂ ಸಿಗಲಿದೆ.

2023-24 ರ ಸಾಲಿನ ವರ್ಷಕ್ಕೆ ಜಿಎಸ್​ಟಿ ಪರಿಹಾರ ಹೊರತುಪಡಿಸಿ 92,000 ಕೋಟಿ ರೂ ತೆರಿಗೆ ಸಂಗ್ರಹಿಸಬೇಕೆಂದು ವಾಣಿಜ್ಯ ಇಲಾಖೆಗೆ ಗುರಿ ಕೊಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com