ವಿಧವೆಗೆ ಮನೆ ಇರುವ ನಿವೇಶನ ಹಿಂದಿರುಗಿಸಿ, ಪರಿಹಾರಕ್ಕೆ ಆದೇಶಿಸಿದ ಹೈಕೋರ್ಟ್

ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ವೇಳೆ ಮೃತಪಟ್ಟ ವ್ಯಕ್ತಿಯ ಪತ್ನಿಗೆ ಹಂಚಿಕೆಯಾಗಿದ್ದ ನಿವೇಶನವನ್ನು ಹಿಂದಿರುಗಿಸುವಂತೆ ಮತ್ತು ಕಾನೂನು ಹೋರಾಟ ನಡೆಸಿದ ವಿಧವೆಗೆ 50 ರೂಪಾಯಿ ಪರಿಹಾರ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ವೇಳೆ ಮೃತಪಟ್ಟ ವ್ಯಕ್ತಿಯ ಪತ್ನಿಗೆ ಹಂಚಿಕೆಯಾಗಿದ್ದ ನಿವೇಶನವನ್ನು ಹಿಂದಿರುಗಿಸುವಂತೆ ಮತ್ತು ಕಾನೂನು ಹೋರಾಟ ನಡೆಸಿದ ವಿಧವೆಗೆ 50 ರೂಪಾಯಿ ಪರಿಹಾರ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ದೊಡ್ಡಬೆಳವಂಗಲದ ವಿಧವೆ ನಾಗಮ್ಮ ಅವರಿಗೆ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚಿಸಿದ ಹೈಕೋರ್ಟ್, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಉಪ ಆಯುಕ್ತರು ಮತ್ತು ದೊಡ್ಡಬೆಳವಂಗಲದ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗೆ 50 ಸಾವಿರ ರೂ. ದಂಡ ವಿಧಿಸಿದೆ.

ಅರ್ಜಿದಾರರಾದ ನಾಗಮ್ಮ ಅವರಿಗೆ ಜಂಟಿಯಾಗಿ ಮತ್ತು ಪ್ರತ್ಯೇಕವಾಗಿ ವೆಚ್ಚವನ್ನು ಪಾವತಿಸುವಂತೆ ಸೂಚಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ, ವಿಧವೆಗೆ ವ್ಯಾಜ್ಯ ವೆಚ್ಚ 50,000 ರೂ.ಗಳನ್ನು ಪಾವತಿಸುವಂತೆ ಸೂಚಿಸಿದ್ದಾರೆ. ಅಲ್ಲದೆ ಪಂಚಾಯಿತಿಯ ಕಾಯ್ದೆಯು ಅರ್ಜಿದಾರರ ಆಸ್ತಿಯ ಹಕ್ಕನ್ನು ಕಸಿದುಕೊಂಡಿದೆ ಎಂದು ಹೇಳಿದ್ದಾರೆ.

ಎರಡನೇ ಬಾರಿ ನ್ಯಾಯಾಲಯದ ಮೆಟ್ಟಿಲೇರಿದ ನಂತರ ವಿಧವೆಗೆ ಮನೆಯೊಂದಿಗೆ ನಿವೇಶನ ನೀಡಲಾಗಿದೆ. 2008 ರಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಿರ್ಲಕ್ಷ್ಯದಿಂದ ಯಲಹಂಕದಲ್ಲಿ ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವ ವೇಳೆ ನಾಗಮ್ಮ ಅವರ ಪತಿ ನರಸಿಂಹಯ್ಯ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com