ಫೆ.23ಕ್ಕೆ ಸಂಡೂರಿಗೆ ಅಮಿತ್ ಶಾ; ಬೃಹತ್‌ ಸಮಾವೇಶ: ಸಚಿವ ಬಿ. ಶ್ರೀರಾಮುಲು

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.23ರಂದು ಸಂಡೂರಿಗೆ ಆಗಮಿಸಲಿದ್ದು, ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಶನಿವಾರ ಹೇಳಿದ್ದಾರೆ.
ಸಚಿವ ಬಿ. ಶ್ರೀರಾಮುಲು.
ಸಚಿವ ಬಿ. ಶ್ರೀರಾಮುಲು.

ಬಳ್ಳಾರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.23ರಂದು ಸಂಡೂರಿಗೆ ಆಗಮಿಸಲಿದ್ದು, ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಶನಿವಾರ ಹೇಳಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ತೋರಣಗಲ್ಲಿನಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ಬಿಜೆಪಿ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಸಂಡೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ವಿಪಕ್ಷ ನಾಯಕರು ಬಜೆಟ್ ವೇಳೆ ಕಿವಿಯಲ್ಲಿ ಹೂ ಇಟ್ಟುಕೊಂಡು ಬಂದಿದ್ದರು. ಶಿಷ್ಟಾಚಾರ ಪಾಲಿಸದೆ ಅಗೌರವ ತೋರುವ ಕೆಲಸ ಕಾಂಗ್ರೆಸ್ ಮಾಡಿದೆ. ಕಾಂಗ್ರೆಸ್ ನಾಯಕರು ಪ್ರಚಾರಕ್ಕಾಗಿ ಡ್ರಾಮಾ ಆರಂಭಿಸಿದ್ದು, ಅದೊಂದು ಡ್ರಾಮಾ ಕಂಪನಿಯಾಗಿದೆ. ಬಜೆಟ್ ಜನರಿಗೆ ತಲುಪದಂತೆ ಮಾಡಬೇಕು ಎಂದು ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮಂಡಿಸಿದ ಬಜೆಟ್ ದೂರದೃಷ್ಟಿಯುಳ್ಳದ್ದಾಗಿದದ್ು, ಜನಸಾಮಾನ್ಯರ ನಾಡಿಮಿಡಿತ ಅರಿತು ಬಜೆಟ್ ಮಂಡಿಸಿದ್ದಾರೆ. ಚುನಾವಣೆಯ ದೃಷ್ಟಿಯನ್ನು ಇಟ್ಟುಕೊಂಡು ಬಜೆಟ್ ಮಂಡಿಸದೆ ಆರ್ಥಿಕ ದೃಷ್ಟಿಕೋನವಿಟ್ಟುಕೊಂಡು ಬಜೆಟ್ ಮಂಡಿಸಿದ್ದಾರೆಂದರು.

ಬಜೆಟ್‌ನಲ್ಲಿ ಬಳ್ಳಾರಿ ಜಿಲ್ಲೆಗೆ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಕೃಷಿ, ಶಿಕ್ಷಣ, ಆರೋಗ್ಯ, ಸಾಂಸ್ಕೃತಿಕ, ಮಹಿಳೆಯರ ಸಬಲೀಕರಣ ಸೇರಿದಂತೆ ಎಲ್ಲ ವಲಯಕ್ಕೆ ಆದ್ಯತೆ ನೀಡಲಾಗಿದೆ. ಹಾಲು ಉತ್ಪಾದನೆ ಹೆಚ್ಚಿಸಲು ಮೆಗಾ ಡೈರಿಗೆ ರೂ.100 ಕೋಟಿ ರೂಪಾಯಿ ಅನುದಾನ ಒದಗಿಸಿದ್ದಾರೆ. ಸಿಗಡಿ ಕೃಷಿ ಕ್ಲಸ್ಟರ್ ಆರಂಭಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com