ಬೆಂಗಳೂರು: ಹಿಟ್ ಅಂಡ್ ರನ್, ಅಪಘಾತದಲ್ಲಿ ಡೆಲಿವರಿ ಬಾಯ್ ದುರ್ಮರಣ

ಮನೆಗಳಿಗೆ ಆಹಾರ ತಲುಪಿಸುತ್ತಿದ್ದ 20 ವರ್ಷದ ಡೆಲಿವರಿ ಹುಡುಗನೊಬ್ಬ  ಹಿಟ್ ಅಂಡ್ ರನ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ  ಮೈಕೋ ಲೇಔಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮನೆಗಳಿಗೆ ಆಹಾರ ತಲುಪಿಸುತ್ತಿದ್ದ 20 ವರ್ಷದ ಡೆಲಿವರಿ ಹುಡುಗನೊಬ್ಬ  ಹಿಟ್ ಅಂಡ್ ರನ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ  ಮೈಕೋ ಲೇಔಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಮೃತನನ್ನು ಹಾಸನ ಮೂಲದ ಕಮೀಲ್ ಅಹಮದ್ ಜಮಾದಾರ್ ಎಂದು ಗುರುತಿಸಲಾಗಿದ್ದು, ಜೆ ಸಿ ನಗರದಲ್ಲಿ ವಾಸವಾಗಿದ್ದ ಎನ್ನಲಾಗಿದೆ. ಬನ್ನೇರುಘಟ್ಟ ರಸ್ತೆಯ ಜಲಭವನದ ಬಳಿ ಬೆಳಗ್ಗೆ 5.30ರ ಸುಮಾರಿಗೆ ವೇಗವಾಗಿ ಬಂದ ವಾಹನವೊಂದು ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಜಮಾದಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಾಹನ ಹಾಗೂ ಚಾಲಕನ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com