ಮಂಗಳೂರು: ಮನೆ ಸಮೀಪವೇ ದಾಳಿ ನಡೆಸಿದ ಕಾಡಾನೆ, ಇಬ್ಬರು ಮಹಿಳೆಯರು ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ರಂಜಿತಾ (21) ಮತ್ತು ರಮೇಶ್ ರೈ ನೈಲಾ (55) ಎಂದು ಗುರುತಿಸಲಾಗಿದೆ.
ಆನೆ ದಾಳಿ
ಆನೆ ದಾಳಿ
Updated on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ರಂಜಿತಾ (21) ಮತ್ತು ರಮೇಶ್ ರೈ ನೈಲಾ (55) ಎಂದು ಗುರುತಿಸಲಾಗಿದೆ.

ರಂಜಿತಾ ಅವರು ತಾವು ಕೆಲಸ ಮಾಡುತ್ತಿರುವ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕ ಹಾಲು ಸೊಸೈಟಿಗೆ ತೆರಳುತ್ತಿದ್ದಾಗ ಅವರ ಮನೆಯ ಸಮೀಪವೇ ಆನೆ ದಾಳಿ ನಡೆಸಿದೆ. ಆಕೆಯ ಕಿರುಚಾಟ ಕೇಳಿ ರಕ್ಷಿಸಲು ಹೋದ ನೈಲಾ ಅವರ ಮೇಲೂ ಆನೆ ದಾಳಿ ಮಾಡಿದೆ.

ಗಂಭೀರವಾಗಿ ಗಾಯಗೊಂಡಿದ್ದ ನೈಲಾ ಸ್ಥಳದಲ್ಲೇ ಮೃತಪಟ್ಟರೆ, ರಂಜಿತಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಕೆಲವು ತಿಂಗಳಿಂದ ಈ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಂದ ದಾಳಿ ನಡೆಯುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com