ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಚಿರತೆ ಸಾವು
ಕೋಟೆ ನಾಡು ಚಿತ್ರದುರ್ಗದ ದೊಡ್ಡಸಿದ್ದವ್ವನ ಹಳ್ಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಂಗಳವಾರ ವಾಹನ ಡಿಕ್ಕಿ ಹೊಡೆದು ಚಿರತೆ ಮೃತಪಟ್ಟಿದೆ.
Published: 21st February 2023 12:39 PM | Last Updated: 21st February 2023 12:39 PM | A+A A-

ಸತ್ತು ಬಿದ್ದ ಚಿರತೆ
ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದ ದೊಡ್ಡಸಿದ್ದವ್ವನ ಹಳ್ಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಂಗಳವಾರ ವಾಹನ ಡಿಕ್ಕಿ ಹೊಡೆದು ಚಿರತೆ ಮೃತಪಟ್ಟಿದೆ. ಚಿರತೆ ರಾಷ್ಟ್ರೀಯ ಹೆದ್ದಾರಿ ದಾಟುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಡಿಕ್ಕಿಯಾದ ರಭಸಕ್ಕೆ ಚಿರತೆ ತೀವ್ರ ರಕ್ತದ ಮಡುವಿನಲ್ಲಿ ಬಿದ್ದಿತು.
ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನ ಪತ್ತೆಯಾಗಿಲ್ಲ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿ ತಿಳಿದ ಸುತ್ತಮುತ್ತಲ ಜನರು ಚಿರತೆ ನೋಡಲು ಸ್ಥಳಕ್ಕೆ ಧಾವಿಸುತ್ತಿದ್ದರು.
A leopard that was hit by an unidentified vehicle was killed on the spot at DS Halli village of Chitradurga district on Tuesday.@XpressBengaluru pic.twitter.com/5OV5P1btdH
— Subash_TNIE (@S27chandr1_TNIE) February 21, 2023