ಸೈಬರ್ ಅಪರಾಧಗಳ ಬಗ್ಗೆ ಜಾಗರೂಕರಾಗಿರಿ: ಜನತೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ
ಸೈಬರ್ ಅಪರಾಧಗಳನ್ನು ತಡೆಗಟ್ಟಲು ಗೃಹ ಇಲಾಖೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಆನ್‌ಲೈನ್ ಬ್ಯಾಂಕಿಂಗ್ ಬಳಸುವವರು ಹೆಚ್ಚಿನ ಜಾಗರೂಕರಾಗಿರಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸೋಮವಾರ ಹೇಳಿದರು.
Published: 21st February 2023 08:54 AM | Last Updated: 21st February 2023 05:17 PM | A+A A-

ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ಸೈಬರ್ ಅಪರಾಧಗಳನ್ನು ತಡೆಗಟ್ಟಲು ಗೃಹ ಇಲಾಖೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಆನ್‌ಲೈನ್ ಬ್ಯಾಂಕಿಂಗ್ ಬಳಸುವವರು ಹೆಚ್ಚಿನ ಜಾಗರೂಕರಾಗಿರಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸೋಮವಾರ ಹೇಳಿದರು.
ರಾಜ್ಯ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಬಿಜೆಪಿ ಎಂಎಲ್ ಸಿ ಎಂಎಲ್ ಸಿ ಭಾರತಿ ಶೆಟ್ಟಿ ಅವರು, ಸೈಬರ್ ಕ್ರೈಂಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಬೇರೆ ಬೇರೆ ಹೆಸರಿನಲ್ಲಿ ಸಿಮ್ ಕಾರ್ಡ್ ಗಳನ್ನು ಪಡೆಯುವುದರಿಂದ ಮೊಬೈಲ್ ಸಿಮ್ ನೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯಗೊಳಿಸಬೇಕು ಎಂದು ಸಲಹೆ ನೀಡಿದರು.
ಭಾರತಿ ಶೆಟ್ಟಿ ಅವರ ಸಲಹೆಗೆ ಪ್ರತಿಕ್ರಿಯಿಸಿದ ಸಚಿವರು, ಒಬ್ಬ ವ್ಯಕ್ತಿ ಗರಿಷ್ಠ ಒಂಬತ್ತು ಸಿಮ್ ಕಾರ್ಡ್‌ಗಳನ್ನು ಪಡೆಯಬಹುದು. ಈ ಸಿಮ್ ಕಾರ್ಡ್ ಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಬೇಕಾಗುತ್ತದೆ. ಆಧಾರ್ ಕಡ್ಡಾಯ ಮಾಡುವ ನಿರ್ಧಾರ ಕೇಂದ್ರದ ವ್ಯಾಪ್ತಿಗೆ ಬರುತ್ತದೆ. ಈಗಾಗಲೇ ಈ ವಿಚಾರವನ್ನು ಕೇಂದ್ರ ಸರ್ಕಾರದ ಬಳಿ ಪ್ರಸ್ತಾಪಿಸಲಾಗಿದೆ. ಸೈಬರ್ ಅಪರಾಧಗಳ ತಡೆಯಲು ರಾಜ್ಯಾದ್ಯಂತ 45 ಸೈಬರ್ ಪೊಲೀಸ್ ಠಾಣೆಗಳನ್ನು ತೆರೆಯುವುದು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿದೆ: ಆರಗ ಜ್ಞಾನೇಂದ್ರ
ಸೈಬರ್ ಅಪರಾಧಗಳ ಬಗ್ಗೆ ಜನರು ಜಾಗರೂಕರಾಗಿರಬೇಕು, ವಿಶೇಷವಾಗಿ ಆನ್‌ಲೈನ್ ಬ್ಯಾಂಕಿಂಗ್ ಬಳಸುವವರು ಹೆಚ್ಚಿನ ಜಾಗರೂಕರಾಗಿರಬೇಕು. ಹೆಚ್ಚು ತಿಳುವಳಿಕೆಯುಳ್ಳವರೇ ಸೈಬರ್ ಅಪರಾಧಗಳಲ್ಲಿ ಭಾಗಿಯಾಗುತ್ತಿದ್ದಾರೆ. ಸೈಬರ್ ಅಪರಾಧಗಳನ್ನು ತಡೆಯಲು ಪೊಲೀಸರು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡುವವರಿಗೂ ಹಲವು ನಿಯಮಗಳು ಜಾರಿಯಲ್ಲಿವೆ.
ಸಿಐಡಿಯಲ್ಲಿ ವಿಶೇಷ ಸೈಬರ್ ಘಟಕವಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ವಿಶೇಷ ತರಬೇತಿಯನ್ನು ನೀಡಲಾಗಿದೆ ಮತ್ತು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಕೂಡ ಕೈಗೊಳ್ಳಲಾಗಿದೆ. "ಜನರು ಜಾಗರೂಕರಾಗಿರಬೇಕು ಮತ್ತು ಆನ್‌ಲೈನ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಳಸುವವರು ಹೆಚ್ಚು ಜಾಗರೂಕರಾಗಿರಬೇಕು. 2020, 2021, 2022 ಮತ್ತು 2023 ರಲ್ಲಿ (ಜನವರಿ) ಕ್ರಮವಾಗಿ 10738, 8132, 12551 ಮತ್ತು 1325 ಪ್ರಕರಣಗಳು ವರದಿಯಾಗಿವೆ ಎಂದು ಸಚಿವರು ಮಾಹಿತಿ ನೀಡಿದರು.