ಕೆಳಸೇತುವೆ ನಿರ್ಮಾಣಕ್ಕೆ ಒತ್ತಾಯ: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿ ತಡೆದು ಪ್ರತಿಭಟನೆ; ಪೋಲೀಸರಿಂದ ಲಘು ಲಾಠಿ ಪ್ರಹಾರ

ಮಂಡ್ಯ ತಾಲೂಕಿನ ಹನಕೆರೆ ಬಳಿ ಕೆಳಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಹನಕೆರೆ ಮತ್ತು ಮಲ್ಲಯ್ಯನ ದೊಡ್ಡಿ ಬೋರೆ ಸುತ್ತಮುತ್ತಲಿನ ಗ್ರಾಮಗಳ ಜನರು, ರೈತ ಮುಖಂಡರು ಒಟ್ಟುಗೂಡಿ ಸೋಮವಾರ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ಹೈವೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ಗ್ರಾಮಸ್ಥರ ಪ್ರತಿಭಟನೆ
ಗ್ರಾಮಸ್ಥರ ಪ್ರತಿಭಟನೆ

ಮಂಡ್ಯ: ಮಂಡ್ಯ ತಾಲೂಕಿನ ಹನಕೆರೆ ಬಳಿ ಕೆಳಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಹನಕೆರೆ ಮತ್ತು ಮಲ್ಲಯ್ಯನ ದೊಡ್ಡಿ ಬೋರೆ ಸುತ್ತಮುತ್ತಲಿನ ಗ್ರಾಮಗಳ ಜನರು, ರೈತ ಮುಖಂಡರು ಒಟ್ಟುಗೂಡಿ ಸೋಮವಾರ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ಹೈವೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಹನಕೆರೆ ಮತ್ತು ಮಲ್ಲಯ್ಯನ ದೊಡ್ಡಿ ಗ್ರಾಮದಲ್ಲಿ ಅಂಡರ್‌ಪಾಸ್‌ ನಿರ್ಮಿಸುವಂತೆ ಆಗ್ರಹಿಸಿ ನೂರಾರು ರೈತ ಮುಖಂಡರಾದ ಮಧುಚಂದನ್‌ ಮತ್ತು ಪ್ರಸನ್ನ ಎನ್‌ ಗೌಡ ನೇತೃತ್ವದಲ್ಲಿ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಹನಕೆರೆ ಬಳಿ ಕೆಳಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಸುತ್ತಮುತ್ತಲಿನ ಗ್ರಾಮಗಳ ಜನರು, ರೈತಸಂಘದ ಸದಸ್ಯರು ಸೋಮವಾರ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ಹೈವೆಯನ್ನು 2 ಗಂಟೆಗೂ ಹೆಚ್ಚುಕಾಲ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು.

ಹೆದ್ದಾರಿ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು ಇದೇ ಮೊದಲ ಬಾರಿಗೆ ಗ್ರಾಮಸ್ಥರು ದೊಡ್ಡ ಮಟ್ಟದಲ್ಲಿ ಬಂದ್‌ ನಡೆಸಿ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೆದ್ದಾರಿಯ ಎರಡೂ ಕಡೆ ಎತ್ತಿನ ಗಾಡಿ, ಟ್ರ್ಯಾಕ್ಟರ್‌ ಹಾಗೂ ಜಾನುವಾರುಗಳನ್ನು ನಿಲ್ಲಿಸಿದ್ದ ಕಾರಣ ಸಂಚಾರ ಅಸ್ತವ್ಯವಸ್ತಗೊಂಡಿತ್ತು. 2 ಕಿ.ಮೀ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಈ ನಡುವೆ ಮಂಡ್ಯ ಎಸ್ಪಿ ಎನ್.ಯತೀಶ್ ಸ್ಥಳಕ್ಕೆ ಧಾವಿಸಿ ಪ್ರತಿಭಟನೆ ಹಿಂಪಡೆದು ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದರು. ಆದರೆ ಎನ್‌ಎಚ್‌ಎಐ ಅಧಿಕಾರಿಗಳು ಲಿಖಿತ ಭರವಸೆ ನೀಡಬೇಕು ಎಂದು ರೈತ ಮುಖಂಡ ಮಧುಚಂದನ್ ಒತ್ತಾಯಿಸಿದರು. ಎನ್‌ಎಚ್‌ಎಐ ಅಧಿಕಾರಿಯೊಬ್ಬರು ಹನಕೆರೆಯಲ್ಲಿ ಅಂಡರ್‌ಪಾಸ್ ನಿರ್ಮಿಸುವ ಆದೇಶದ ಪ್ರತಿಯನ್ನು ತೋರಿಸಿದಾಗ, ಮಧುಚಂದನ್ ಹಳೆಯ ಆದೇಶ ಎಂದು ಪ್ರತಿಯನ್ನು ಹರಿದು ಹಾಕಿದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.  

ಈ ಸಂದರ್ಭದಲ್ಲಿ ಅಧಿಕಾರಿಗಳು, ಪೊಲೀಸರು ಹಾಗೂ ಪ್ರತಿಭಟಕಾರರ ನಡುವೆ ವಾಗ್ವಾದ, ತಳ್ಳಾಟ, ನೂಕಾಟ ನಡೆಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ನಂತರ ಎರಡು ತಿಂಗಳಲ್ಲಿ ಅಂಡರ್ ಪಾಸ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಎನ್ ಎಚ್ ಎಐ ಅಧಿಕಾರಿಗಳು ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆ ಸಂಘಟಿಸಿದ್ದ ರೈತಸಂಘ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಎಸ್‌.ಸಿ.ಮಧುಚಂದನ್‌ ಹಾಗೂ ಮುಖಂಡ ಪ್ರಸನ್ನ ಗೌಡ ಅವರನ್ನು ವಶಕ್ಕೆ ಪಡೆದ ಪೊಲೀಸರು ಗ್ರಾಮಾಂತರ ಪೊಲೀಸ್‌ ಠಾಣೆಗೆ ಕರೆದೊಯ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com