7ನೇ ವೇತನ ಆಯೋಗ ಜಾರಿಯಾಗದಿದ್ದರೆ ಮಾರ್ಚ್ 1 ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿ, ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1 ರಿಂದ ರಾಜ್ಯದಲ್ಲಿ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಕರ್ನಾಟಕ ಸರ್ಕಾರಿ ನೌಕರರ ಸಂಘ ಘೋಷಿಸಿದೆ.
Published: 25th February 2023 04:28 PM | Last Updated: 25th February 2023 07:23 PM | A+A A-

ಪ್ರಾತಿನಿಧಿಕ ಚಿತ್ರ
ಶಿವಮೊಗ್ಗ: ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿ, ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1 ರಿಂದ ರಾಜ್ಯದಲ್ಲಿ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಕರ್ನಾಟಕ ಸರ್ಕಾರಿ ನೌಕರರ ಸಂಘ ಘೋಷಿಸಿದೆ.
ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮಾತನಾಡಿ, ಬೇಡಿಕೆ ಈಡೇರದಿದ್ದರೆ ಎಲ್ಲಾ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗದೇ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ ಎಂದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಷಡಕ್ಷರಿ, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರಿ ನೌಕರರ ಬೇಡಿಕೆ ಕುರಿತು ಕಣ್ಣು ಮುಚ್ಚಿಕೊಂಡಿದ್ದಾರೆ. ಸಿಎಂ ಬೊಮ್ಮಾಯಿ ಅವರ ವರ್ತನೆ ಒಂಬತ್ತು ಲಕ್ಷ ಸರ್ಕಾರಿ ನೌಕರರಿಗೆ ಬೇಸರ ತಂದಿದೆ’ ಎಂದರು.
ಇದನ್ನೂ ಓದಿ: 7ನೇ ವೇತನ ಆಯೋಗದ ವರದಿ ಶೀಘ್ರವೇ ಜಾರಿಗೊಳಿಸಿ: ಸರ್ಕಾರಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಒತ್ತಾಯ
ಶಾಲಾ-ಕಾಲೇಜುಗಳು ಮತ್ತು ಆಸ್ಪತ್ರೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಕೆಲಸಕ್ಕೆ ಗೌರುಹಾಜರಾಗುವ ಮೂಲಕ ಸರ್ಕಾರಿ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಅವರು ಹೇಳಿದರು.
ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರ ಮಧ್ಯಂತರ ಆದೇಶಗಳನ್ನು ಜಾರಿಗೊಳಿಸಿದರೆ ಮಾತ್ರ ಪ್ರತಿಭಟನೆಯನ್ನು ಹಿಂಪಡೆಯಲಾಗುತ್ತದೆ. ಇಲ್ಲದಿದ್ದಲ್ಲಿ ಹೋರಾಟ ಮುಂದುವರಿಸುತ್ತೇವೆ ಎಂದು ಷಡಕ್ಷರಿ ತಿಳಿಸಿದ್ದಾರೆ.