ಬೆಳಗಾವಿ: 8 ಕೋಟಿಗೂ ಅಧಿಕ ರೈತರ ಖಾತೆಗಳಿಗೆ ಪಿಎಂ ಕಿಸಾನ್ 13ನೇ ಕಂತಿನ ಹಣ, ನಾಳೆ ಮೋದಿ ಬಿಡುಗಡೆ

ನಾಳೆ ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 8 ಕೋಟಿಗೂ ಹೆಚ್ಚಿನ ರೈತರ ಖಾತೆಗಳಿಗೆ 13ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ/ಬೆಳಗಾವಿ: ನಾಳೆ ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 8 ಕೋಟಿಗೂ ಹೆಚ್ಚಿನ ರೈತರ ಖಾತೆಗಳಿಗೆ 13ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ.

ಭಾರತೀಯ ರೈಲ್ವೆ, ಜಲಜೀವನ್ ಮಿಷನ್ ಜೊತೆಗೆ ಪಿಎಂ ಕಿಸಾನ್ ಯೋಜನೆಯ 8 ಕೋಟಿಗೂ ಅಧಿಕ ರೈತರ ಖಾತೆಗಳಿಗೆ ತಲಾ 2 ಸಾವಿರದಂತೆ ಒಟ್ಟಾರೆ ರೂ. 16,800 ಕೋಟಿ ಹಣವನ್ನು ನೇರವಾಗಿ ವರ್ಗಾವಣೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com