TNIE-ಕನ್ನಡಪ್ರಭ ಆನ್ಲೈನ್ ವರದಿ ಫಲಶೃತಿ: ಹುಲಿ ದಾಳಿ-ಸಾವು ಕುರಿತು ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು!

ರಾಜ್ಯದಲ್ಲಿ ಹುಲಿ ದಾಳಿ ಮತ್ತು ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (The New Indian Expres) ಮತ್ತು ಕನ್ನಡಪ್ರಭ (KannadaPrabha.Com) ಮಾಡಿದ್ದ ವರದಿಯ ಪರಿಣಾಮ ಉಪ ಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಹುಲಿ ದಾಳಿ (ಸಂಗ್ರಹ ಚಿತ್ರ)
ಹುಲಿ ದಾಳಿ (ಸಂಗ್ರಹ ಚಿತ್ರ)

ಬೆಂಗಳೂರು: ರಾಜ್ಯದಲ್ಲಿ ಹುಲಿ ದಾಳಿ ಮತ್ತು ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (The New Indian Expres) ಮತ್ತು ಕನ್ನಡಪ್ರಭ (KannadaPrabha.Com) ಮಾಡಿದ್ದ ವರದಿಯ ಪರಿಣಾಮ ಉಪ ಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಹೌದು.. ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿಗೆ ಇಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ಹುಲಿ ಹಿಡಿಯಲು ವಿಫಲವಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಜನರು ತೀವ್ರ ಪಟ್ಟು ಹಡಿದಿದ್ದರು. ಈ ಕುರಿತು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಹುಣಸೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಪಿ.ಮಂಜುನಾಥ್ ಸೇರಿದಂತೆ ವಿರಾಜಪೇಟೆಯ ಸ್ಥಳೀಯರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದೇ ವಿಚಾರವಾಗಿ ಇದೇ ಫೆಬ್ರವರಿ 14ರಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (https://bityl.co/HMoW) ಮತ್ತು ಕನ್ನಡಪ್ರಭ ಆನ್ ಲೈನ್ (https://bityl.co/HMxW) ನಲ್ಲಿ ವರದಿ ಪ್ರಕಟಿಸಲಾಗಿತ್ತು. ಇದೀಗ ಈ ವರದಿಗಳ ಬೆನ್ನಲ್ಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಲೋಕಾಯುಕ್ತರು ಪ್ರಕರಣ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಮಾತ್ರವಲ್ಲದೇ ಈ ಸಂಬಂಧ ರಾಜ್ಯದಲ್ಲಿ ಇಂತಹ ಅನಿಶ್ಚಿತತೆಗಳನ್ನು ತಡೆಗಟ್ಟಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಶ್ನಿಸಿ ಇದಕ್ಕೆ ಉತ್ತರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮತ್ತು ಅರಣ್ಯ ಇಲಾಖೆಗೆ ನಿರ್ದೇಶನ ಕೂಡ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com