ತುಮಕೂರು: ಮಹಿಳಾ ಪಿಎಸ್‌ಐ ಜೊತೆ ಅಸಭ್ಯ ವರ್ತನೆ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಬಂಧನ

ಮಹಿಳಾ ಪಿಎಸ್‌ಐ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಹಿನ್ನೆಲೆಯಲ್ಲಿ ತುಮಕೂರು ಯುವ ಕಾಂಗ್ರೆಸ್'ನ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆ ಅವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತುಮಕೂರು: ಮಹಿಳಾ ಪಿಎಸ್‌ಐ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಹಿನ್ನೆಲೆಯಲ್ಲಿ ತುಮಕೂರು ಯುವ ಕಾಂಗ್ರೆಸ್'ನ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆ ಅವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ತುಮಕೂರು ನಗರದ ತಿಲಕ್ ಪಾರ್ಕ್ ಮಹಿಳಾ ಪಿಎಸ್ಐ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ ಶಶಿ ಹುಲಿಕುಂಟೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಸೆಕ್ಷನ್ ಅಡಿ ಬಂಧಿಸಲಾಗಿದೆ.

ಫೆ.20 ರಂದು ತುಮಕೂರು ನಗರದಲ್ಲಿ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ವಿರುದ್ಧ, ಅವರ ಭಾವಚಿತ್ರ ಇರುವ ಪೋಸ್ಟರ್​ಗಳ ಮೇಲೆ ಪೇ ಎಂಎಲ್​ಎ ಎಂಬಂತಹ ಪೋಸ್ಟರ್ ಅಂಟಿಸಲಾಗಿತ್ತು. ನಿಮಗೆ ಕೆಲಸ ಆಗಬೇಕೆ, ನನಗೆ ಪೇ ಮಾಡಿ, ಭ್ರಷ್ಟಾಚಾರವೇ ನನ್ನ ಮೊದಲ ಆದ್ಯತೆ’ ಎಂದು ಬರೆದಿರುವ ಪೋಸ್ಟರ್ ಅಂಟಿಸಲಾಗಿತ್ತು.

ಇದನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಅಂಟಿಸಿದ್ದರು. ಈ ಸಂಬಂಧ ನಾಲ್ವರನ್ನು ತಿಲಕ್ ಪಾರ್ಕ್ ಪೊಲೀಸರು ಬಂದಿಸಿ ಠಾಣೆಯಲ್ಲಿ ಇಟ್ಟುಕೊಂಡಿದ್ದರು‌.

ಇದಕ್ಕೆ ಜಿಲ್ಲಾ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಶಿ ಹುಲಿಕುಂಟೆ ವಿರೋಧ ವ್ಯಕ್ತಪಡಿಸಿದ ಮಹಿಳಾ ಪಿಎಸ್ಐಗೆ ಕಾರ್ಯಕರ್ತರನ್ನು ಬಿಡುಗಡೆ ಮಾಡುವಂತೆ ಒತ್ತಡ ಹಾಕಿದ್ದಾರೆ. ಇದಕ್ಕೆ ಪಿಎಸ್​ಐ ಒಪ್ಪದ ಕಾರಣ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಬೆದರಿಕೆಯನ್ನೂ ಹಾಕಿದ್ದಾರೆಂದು ತಿಳಿದುಬಂದಿದೆ.

3 ತಿಂಗಳು ಕಾಯಿರಿ ನಮ್ಮ ಸರ್ಕಾರ ಬರುತ್ತದೆ. ಆಗ ನಾನು ನಿಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಆವಾಜ್ ಹಾಕಿದ್ದಾರೆನ್ನಲಾಗಿದೆ.

ವಶಕ್ಕೆ ಪಡೆದ 4 ಜನರ ಜೇಬಿನಲ್ಲಿದ್ದ ಹಣ ಹಾಗೂ ಮೊಬೈಲನ್ನು ಕದ್ದಿದ್ದಾರೆ ಎಂದು ಠಾಣೆ ಎದುರು ಪ್ರತಿಭಟನೆ ಮಾಡುತ್ತೇನೆ ಎಂದು ಆವಾಜ್ ಹಾಕಿದ್ದಾನೆ.

ಬೆದರಿಕೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಇದೀಗ ಶಶಿ ಹುಲಿಕುಂಟೆ ವಿರುದ್ಧ ವಿರುದ್ಧ ಐಪಿಸಿ ಸೆಕ್ಷನ್ 353, 506 ಹಾಗೂ 34ರ ಅಡಿ ಪ್ರಕರಣ ದಾಖಲಿಸಲಾಗಿದೆ. ಬಂಧನದ ಬಳಿಕ ಶಶಿ ಹುಲಿಕುಂಟೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com