ಬೆಂಗಳೂರು: ಮಾಜಿ ಸಚಿವ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬ ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಬಳಿ ಈ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬ ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಬಳಿ ಈ ಘಟನೆ ನಡೆದಿದೆ.

ಮೃತನನ್ನು ಹೆಚ್ ಎಸ್ ಆರ್ ಲೇಔಟ್ ನಿವಾಸಿ ಪ್ರದೀಪ್ (47) ಎಂದು ಗುರುತಿಸಲಾಗಿದೆ. ಈತ ತಲೆಗೆ ಗುಂಡು ಹಾರಿಸಿಕೊಂಡು
ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಡೆತ್ ನೋಟ್ ನಲ್ಲಿ ಅರವಿಂದ ಲಿಂಬಾವಳಿ ಸೇರಿದಂತೆ ಇತರ ಆರು ಜನರ ಹೆಸರನ್ನು ಉಲ್ಲೇಖಿಸಲಾಗಿದೆ.  ಈ ಸಂಬಂಧ ಕಗ್ಗಲೀಪುರ ಪೊಲೀಸ್ ಸ್ಥಳಕ್ಕೆ ಧಾವಿಸಿದ್ದು,  ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com