ಮೈಸೂರು-ಬೆಂಗಳೂರು ಹೆದ್ದಾರಿಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಪತ್ರ

ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇಗೆ ಎರಡನೇ ಹೆಸರು ಮುನ್ನಲೆಗೆ ಬಂದಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.
ಮಾಜಿ ಸಿಎಂ ಎಸ್.ಎಂ.ಕೃಷ್ಣ
ಮಾಜಿ ಸಿಎಂ ಎಸ್.ಎಂ.ಕೃಷ್ಣ

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇಗೆ ಎರಡನೇ ಹೆಸರು ಮುನ್ನಲೆಗೆ ಬಂದಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಎಸ್.ಎಂ.ಕೃಷ್ಣ ಅವರು ಪತ್ರ ಬರೆದಿದ್ದು, ಎಕ್ಸ್'ಪ್ರೆಸ್ ವೇಗೆ ಒಡೆಯರ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ.

ಈ ಹಿಂದೆ ಸಂಸದ ಪ್ರತಾಪ್ ಸಿಂಹ ಅವರು ಇದೇ ಹೆದ್ದಾರಿಗೆ ಕಾವೇರಿ ನದಿ ಹೆಸರು ಇಡುವಂತೆ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದರು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಕಾವೇರಿ ನದಿಯ ಹೆಸರು ಇಡಬೇಕೆಂದು ಸಂಸದ ಪ್ರತಾಪ ಸಿಂಹ್​ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದರು.

10 ಲೇನ್ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಭಾರತಮಾಲಾ ಪರಿಯೋಜನಾ ಹಂತ-ಎಲ್ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ. ಈ ಎಕ್ಸ್‌ಪ್ರೆಸ್‌ವೇಯ ಪ್ರಯೋಜನವು ಬಹು ಆಯಾಮಗಳಾಗಿದ್ದು, ಆರ್ಥಿಕ ಬೆಳವಣಿಗೆ, ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಸಬಲೀಕರಣ, ಪರಿಸರ ಸಂರಕ್ಷಣೆ ಮತ್ತು ಮುಂತಾದವು ಪ್ರಮುಖ ಪ್ರಯೋಜನಗಳಿವೆ ಎಂದು ಹೇಳಿದ್ದರು.

ಇಷ್ಟೇ ಅಲ್ಲದೇ ಉತ್ತರ ಪ್ರದೇಶದ ಯಮುನಾ ಎಕ್ಸ್​​ಪ್ರೆಸ್​ವೇ, ಗಂಗಾ ಎಕ್ಸ್​​ಪ್ರೆಸ್​ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್​ಪ್ರೆಸ್​ವೇ ನಂತೆಯೇ ಮೈಸೂರು-ಬೆಂಗಳೂರು ಹೈವೇಗೆ ಕಾವೇರಿ ಎಕ್ಸ್​​ಪ್ರೆಸ್ ವೇ ಎಂದು ಹೆಸರಿಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿಕೊಂಡಿದ್ದರು. ದಶಪಥ ಹೆದ್ದಾರಿಯಿಂದಾಗಿ ಮೈಸೂರು ಬೆಂಗಳೂರು ಮಧ್ಯದ ಸುಮಾರು 140 ಕಿ.ಮೀ. ದೂರದ ಪ್ರಯಾಣ ವ್ಯಾಪ್ತಿಯನ್ನು ಕೇವಲ 90 ನಿಮಿಷದಲ್ಲಿ ಕ್ರಮಿಸಬಹುದಾಗಿದೆ. ಸದ್ಯ ಇವೆರಡು ನಗರದ ನಡುವಿನ ಸಂಚಾರ ಸಮಯ ಮೂರು ಗಂಟೆ ಹಿಡಿಯುತ್ತಿದೆ. ಕಾಮಗಾರಿ ಬಳಿಕ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ ಆಗಲಿದೆ ಎಂದು ಸಚಿವ ನಿತಿನ್ ಗಡ್ಕರಿ ಈ ಹಿಂದೆ ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com