
ಘಟನಾ ಸ್ಥಳದಲ್ಲಿ ಪೊಲೀಸರ ಪರಿಶೀಲನೆ
ಹಾವೇರಿ: ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ನಡೆದಿದೆ.
ಮೃತರನ್ನು ನವೀನ್ ಕುರಗುಂದ (20) ವಿಕಾಸ್ ಪಾಟೀಲ್ (20 ಹಾಗೂ ನೇಪಾಳ ಮೂಲದ ಪ್ರೇಮ್ ಬೋರಾ (25) ಎಂದು ಗುರುತಿಸಲಾಗಿದೆ. ಹೊಸ ವರ್ಷದ ಪಾರ್ಟಿ ಮುಗಿಸಿ ಈಜಲು ತೆರಳಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ನದಿಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಬೆಳಗ್ಗೆಯಿಂದಲೇ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ. ಹಲಗೇರಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
Four friends who had come to #Haveri to celebrate the #NewYear2023 drowned in a river on Monday. Search OP underway. Police recover one body, reports @KiranTNIE1 @NewIndianXpress @XpressBengaluru @KannadaPrabha @Namma_HD @NammaBengaluroo @karnatakacom pic.twitter.com/EPr8uiqz2l
— Amit Upadhye (@Amitsen_TNIE) January 2, 2023