ಬಿಜೆಪಿ ಮಹದಾಯಿ ಹೋರಾಟಗಾರರ ದಿಕ್ಕು ತಪ್ಪಿಸುತ್ತಿದೆ: ಕರ್ನಾಟಕ ಕಳಸಾ-ಬಂಡೂರಿ ರೈತ ಹೋರಾಟ ಸಮಿತಿ

ಮಹದಾಯಿ ನದಿ ನೀರು ತಿರುವು ಯೋಜನೆಗೆ ಅನುಮೋದನೆ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹೋರಾಟಗಾರರು ಹಾಗೂ ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆಂದು ಕರ್ನಾಟಕ ಕಳಸಾ-ಬಂಡೂರಿ ರೈತ ಹೋರಾಟ ಸಮಿತಿ ಆರೋಪಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಹುಬ್ಬಳ್ಳಿ: ಮಹದಾಯಿ ನದಿ ನೀರು ತಿರುವು ಯೋಜನೆಗೆ ಅನುಮೋದನೆ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹೋರಾಟಗಾರರು ಹಾಗೂ ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆಂದು ಕರ್ನಾಟಕ ಕಳಸಾ-ಬಂಡೂರಿ ರೈತ ಹೋರಾಟ ಸಮಿತಿ ಆರೋಪಿಸಿದೆ.

ಸರ್ಕಾರ ನೀಡಿದ ಭರವಸೆಯಂತೆ ಯೋಜನೆಯನ್ನು ತಕ್ಷಣವೇ ಜಾರಿಗೊಳಿಸಲು ವಿಫಲವಾಗಿದ್ದೇ ಆದರೆ, ಹೊಸ ಆಂದೋಲನವನ್ನು ಪ್ರಾರಂಭಿಸುವುದಾಗಿ ಎಚ್ಚರಿಕೆ ನೀಡಿದೆ.

“ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು 2018 ರ ವಿಧಾನಸಭಾ ಚುನಾವಣೆಯ ಮೊದಲು ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದರು, ಆದರೆ, ಭರವಸೆ ಈಡೇರಿಸಲಿಲ್ಲ. ಅಧಿಕಾರಕ್ಕೆ ಬಂದ ನಂತರ ಏನನ್ನೂ ಮಾಡಲಿಲ್ಲ. ಬೊಮ್ಮಾಯಿ-ಜೋಶಿ ಜೋಡಿಯಲ್ಲೂ ಅದೇ ಮೋಸದ ಆಟ ನಡೆಯುತ್ತಿದೆ ಎಂದು ಸಮಿತಿ ಮುಖಂಡ ಕುಮಾರ ಹಕಾರಿ ಅವರು ಹೇಳಿದ್ದಾರೆ.

ದಾಖಲೆಗಳ ಸತ್ಯಾಸತ್ಯತೆಯನ್ನು ಪ್ರಶ್ನಿಸಿದ ಅವರು, ಯೋಜನೆ ಅನುಷ್ಠಾನದ ಬಗ್ಗೆ ಬಿಜೆಪಿ ನಾಯಕರು ಸುಳ್ಳುಗಳನ್ನು ಹರಡುತ್ತಿದ್ದಾರೆ, ಆದರೆ ಈ ಬಾರಿ ಜನರನ್ನು ಮೂರ್ಖರಾಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಮತ್ತೋರ್ವ ನಾಯಕ ಸಿದ್ದು ತೇಜಿ ಮಾತನಾಡಿ, 2018ರಲ್ಲಿಯೇ ನ್ಯಾಯಮಂಡಳಿಯು ಮಹದಾಯಿ ನದಿ ನೀರಿನಲ್ಲಿ ರಾಜ್ಯದ ಪಾಲಿನ ಪಾಲನ್ನು ನೀಡಿತ್ತು, ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ನಾಲ್ಕು ವರ್ಷಗಳ ಕಾಲ ನಿದ್ರೆಗೆ ಜಾರಿತ್ತು. ಇದೀಗ ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಎಚ್ಚರಗೊಂಡಿದ್ದಾರೆ. ನಾವು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿಲ್ಲ, ಆದರೆ, ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕೆಂಬುದನ್ನು ಬಯಸುತ್ತಿದ್ದೇವೆಂದು ಹೇಳಿದ್ದಾರೆ.

ಯೋಜನೆಯ ಅನುಷ್ಠಾನವನ್ನು ಪ್ರಾರಂಭಿಸಲು ರಾಜ್ಯ ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡುತ್ತಿದ್ದೇವೆ. ಅಷ್ಟರೊಳಗೆ ಯೋಜನೆ ಜಾರಿಗೆ ಬರಬೇಕು. ಇಲ್ಲದೇ ಹೋದಲ್ಲಿ ಹೊಸದಾಗಿ ಮರಳಿ ಪ್ರತಿಭಟನೆ ಆರಂಭಿಸುತ್ತೇವೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com