ಮತದಾರರ ದತ್ತಾಂಶ ತಿರುಚಿದ ಪ್ರಕರಣ: ತಡೆಯಾಜ್ಞೆ ತಂದ ಅಧಿಕಾರಿಗಳು; ತನಿಖೆಗೆ ಹಿನ್ನಡೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತದಾರರ ಮಾಹಿತಿಗಳು,ದತ್ತಾಂಶಗಳನ್ನು ತಿರುಚಿದ ಪ್ರಕರಣದಲ್ಲಿ ಸರ್ಕಾರೇತರ ಸಂಸ್ಥೆ ಚಿಲುಮೆ ಮತ್ತು ಬಿಬಿಎಂಪಿ ಕಂದಾಯ ಅಧಿಕಾರಿಗಳು ಭಾಗಿಯಾಗಿರುವ ಪ್ರಕರಣದ ತನಿಖೆಗೆ ಹಿನ್ನಡೆಯುಂಟಾಗಿದೆ. ನೋಟಿಸ್ ಪಡೆದ ಕೆಲವು ಆರೋಪಿ ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ತನಿಖೆಗೆ ತಡೆಯಾಜ್ಞೆ ತಂದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತದಾರರ ಮಾಹಿತಿಗಳು,ದತ್ತಾಂಶಗಳನ್ನು ತಿರುಚಿದ ಪ್ರಕರಣದಲ್ಲಿ ಸರ್ಕಾರೇತರ ಸಂಸ್ಥೆ ಚಿಲುಮೆ ಮತ್ತು ಬಿಬಿಎಂಪಿ ಕಂದಾಯ ಅಧಿಕಾರಿಗಳು ಭಾಗಿಯಾಗಿರುವ ಪ್ರಕರಣದ ತನಿಖೆಗೆ ಹಿನ್ನಡೆಯುಂಟಾಗಿದೆ. ನೋಟಿಸ್ ಪಡೆದ ಕೆಲವು ಆರೋಪಿ ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ತನಿಖೆಗೆ ತಡೆಯಾಜ್ಞೆ ತಂದಿದ್ದಾರೆ.

ಹಲಸೂರು ಗೇಟ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು, ಕಂದಾಯ ಅಧಿಕಾರಿಗಳು ಡಿಸೆಂಬರ್ 22 ರಂದು ತಡೆಯಾಜ್ಞೆ ತಂದಿದ್ದಾರೆ. ನಾವು ವಿಚಾರಣೆಗಾಗಿ ಇನ್ನೂ ಕೆಲವು ಅಧಿಕಾರಿಗಳಿಗೆ ನೋಟಿಸ್ ನೀಡಲಿದ್ದೇವೆ. ಆದರೆ ಅದಕ್ಕೂ ಮೊದಲು, ತನಿಖೆಯ ವಿರುದ್ಧ ನಮಗೆ ತಡೆಯಾಜ್ಞೆ ಪ್ರತಿಯನ್ನು ನೀಡಲಾಯಿತು. ಸಂಸ್ಥೆಯ ಮುಖ್ಯಸ್ಥರಾಗಿರುವ ಬಿಬಿಎಂಪಿ ಆಯುಕ್ತರು ಈ ಸಂಬಂಧ ಪ್ರತಿವಾದಿಯಾಗಿದ್ದು, ತಡೆಯನ್ನು ತೆರವು ಮಾಡುವುದು ಅವರಿಗೆ ಬಿಟ್ಟಿದ್ದು, ತನಿಖೆಯನ್ನು ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಲು ನಮಗೆ ಅವಕಾಶವಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣದಲ್ಲಿ ಬಿಬಿಎಂಪಿ ಪ್ರತಿವಾದಿಯಾಗಿರುವುದರಿಂದ ಶೀಘ್ರವೇ ತಡೆಯನ್ನು ತೆರವು ಮಾಡಿ ತನಿಖೆ ಪೂರ್ಣಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಈ ಹಿಂದೆ ಕೆಲವು ಕಂದಾಯ ಅಧಿಕಾರಿಗಳ ಬೆನ್ನಿಗೆ ಬಿದ್ದಿದ್ದ ಬಿಬಿಎಂಪಿ ಕಾರ್ಮಿಕರ ಸಂಘ ಕೂಡ ಕಳಂಕಿತ ಎನ್‌ಜಿಒ ಸಂಸ್ಥೆಯ ಮುಖ್ಯಸ್ಥರನ್ನು ಬಂಧಿಸಿ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದರಿಂದ ಪ್ರಕರಣದಿಂದ ದೂರವಿರಲು ನಿರ್ಧರಿಸಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ತಿದ್ದಿದೆ. ಕೆಲವು ಕಂದಾಯ ಅಧಿಕಾರಿಗಳು ಸಹಾಯ ಮಾಡಿದ ನಕಲಿ ಬೂತ್ ಮಟ್ಟದ ಅಧಿಕಾರಿಗಳ ಕಾರ್ಡ್‌ಗಳನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿರುವುದರಿಂದ, ನಮ್ಮ ವಕೀಲರು ಮಧ್ಯಪ್ರವೇಶಿಸದಂತೆ ಅದನ್ನು ಕಂದಾಯ ಅಧಿಕಾರಿಗಳು ಮತ್ತು ಪೊಲೀಸರಿಗೆ ಬಿಟ್ಟುಕೊಡಲು ನಮಗೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com