ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ: ವ್ಯಕ್ತಿ ಬಂಧನ, 10.50 ಲಕ್ಷ ರೂ. ವಶ

ವಿಧಾನಸೌಧದಲ್ಲಿ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು. ಸುಮಾರು 10.50 ಲಕ್ಷ ರೂಪಾಯಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿಧಾನಸೌಧದಲ್ಲಿ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು. ಸುಮಾರು 10.50 ಲಕ್ಷ ರೂಪಾಯಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬುಧವಾರ ಸಂಜೆ ನಡೆದಿದೆ.
    
ಬುಧವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಒಬ್ಬ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಗೇಟ್‌ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಮಂಡ್ಯ ಮೂಲದ ಈ ವ್ಯಕ್ತಿಯಿಂದ ಬ್ಯಾಗ್‌ನಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿದೆ.

ವ್ಯಕ್ತಿಯ ಬಳಿ ಹಣದ ಮೂಲದ ಕುರಿತಾಗಿ ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ಆತ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು, ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ವ್ಯಕ್ತಿ ಇಷ್ಟು ಮೊತ್ತದ ಹಣವನ್ನು ವಿಧಾನಸೌಧಕ್ಕೆ ಏಕೆ ತೆಗೆದುಕೊಂಡು ಹೋಗುತ್ತಿದ್ದ ಎಂಬುವುದು ಇನ್ನೂ ದೃಢಪಟ್ಟಿಲ್ಲ. ಹಣದ ಮೂಲದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com