ಪಿಎಸ್ಐ ನೇಮಕಾತಿ ಹಗರಣ: ದಿವ್ಯಾ ಹಾಗರಗಿ ಸೇರಿ 26 ಮಂದಿಗೆ ಜಾಮೀನು ಮಂಜೂರು

ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪಿಎಸ್​ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಲಬುರಗಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪಿಎಸ್​ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

ಕಿಂಗ್​ಪಿನ್ ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ, ಡಿವೈಎಸ್​ಪಿ ಮಲ್ಲಿಕಾರ್ಜುನ ಸೇರಿದಂತೆ 26 ಜನರಿಗೆ ಕಲಬುರಗಿ ಸೆಷನ್ಸ್ ಕೋರ್ಟ್​ ಜಡ್ಜ್​ ಕೆ.ಬಿ.ಪಾಟೀಲ್ ಜಾಮೀನು ನೀಡಿದ್ದಾರೆ.

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಈವರೆಗೆ 36 ಜನರಿಗೆ ಜಾಮೀನು ಸಿಕ್ಕಿದೆ. 8 ಅಭ್ಯರ್ಥಿಗಳು, 5 ಪರೀಕ್ಷಾ ಮೇಲ್ವಿಚಾರಕಿಯರು, 3 ಪೊಲೀಸ್ ಇಲಾಖೆ ಅಧಿಕಾರಿಗಳು, ಮಧ್ಯವರ್ತಿಗಳು ಸೇರಿ 26 ಜನರಿಗೆ ಜಾಮೀನು ನೀಡಲಾಗಿದೆ.

ರಾಜ್ಯದಲ್ಲಿ 2021 ರ ಅಕ್ಟೋಬರ್ ತಿಂಗಳಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆದಿತ್ತು. ಆದರೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು ಬೆಳಕಿಗೆ ಬಂದಿತ್ತು. ಹೀಗಾಗಿ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿತ್ತು. 2022 ರ ಎಪ್ರಿಲ್ 8 ರಂದು ಕಲಬುರಗಿ ಚೌಕ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ತನಿಖೆ ಆರಂಭಿಸಿದ್ದ ಸಿಐಡಿ ಪೊಲೀಸರು ಇಲ್ಲಿವರಗೆ 53 ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com