ಜಯಮೃತ್ಯುಂಜಯ ಸ್ವಾಮೀಜಿ
ಜಯಮೃತ್ಯುಂಜಯ ಸ್ವಾಮೀಜಿ

ಸಚಿವ ಸಂಪುಟ ನೀಡಿದ 2ಡಿ ಮೀಸಲಾತಿ ತಿರಸ್ಕರಿಸಿದ್ದೇವೆ: ಜಯಮೃತ್ಯುಂಜಯ ಸ್ವಾಮೀಜಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆ ಪಂಚಮಸಾಲಿ ಸಮುದಾಯಕ್ಕೆ ನೀಡಿದ 2ಡಿ ಮೀಸಲಾತಿಯನ್ನು ನಾವು ತಿರಸ್ಕಾರ ಮಾಡುತ್ತಿದ್ದೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಅವರು ಗುರುವಾರ ಹೇಳಿದ್ದಾರೆ.

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆ ಪಂಚಮಸಾಲಿ ಸಮುದಾಯಕ್ಕೆ ನೀಡಿದ 2ಡಿ ಮೀಸಲಾತಿಯನ್ನು ನಾವು ತಿರಸ್ಕಾರ ಮಾಡುತ್ತಿದ್ದೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಅವರು ಗುರುವಾರ ಹೇಳಿದ್ದಾರೆ.

ಇಂದು ಬೆಳಗಾವಿಯಲ್ಲಿ 2ಡಿ ಮೀಸಲಾತಿ ವಿಚಾರವಾಗಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಸ್ವಾಮೀಜಿ, ಮುಂದಿನ 24 ಗಂಟೆಯಲ್ಲಿ ಸಿಎಂ ಬೊಮ್ಮಾಯಿ ಪಂಚಮಸಾಲಿಗೆ 2ಎ ಮೀಸಲಾತಿ ನೀಡಬೇಕು. ಸಿಎಂ ಮೀಸಲಾತಿ ನೀಡ್ತಿರೋ ಇಲ್ವೋ ಅಂತ ಹೇಳಬೇಕು. ಸಿಎಂ ಮಾತು ತಪ್ಪಿದ್ದಾರೆ ಎಂದು ಇಡೀ ಸಮಾಜದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ ಎಂದರು.

ಸಿಎಂ ಬೊಮ್ಮಾಯಿ ಮಾತಿಗೆ ಗೌರವ ಕೊಟ್ಟು ನಾವು ಹೋರಾಟವನ್ನು ತಾತ್ಕಾಲಿಕ ಸ್ಥಗಿತ ಮಾಡಿದ್ದೇವು. 2ಡಿ ಮೀಸಲಾತಿಯಿಂದ ನಮ್ಮ ಸಮುದಾಯದ ಜ‌‌ನ ಮತ್ತು ಆಡಳಿತ ಪಕ್ಷದ ಯಾವುದೇ ಶಾಸಕರು ಸಮಾಧಾನಗೊಂಡಿಲ್ಲ. ಜನವರಿ 12ರೊಳಗೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕು. ಇಲ್ಲವಾದರೆ ಜನವರಿ 13ರಂದು ಶಿಗ್ಗಾಂವಿಯಲ್ಲಿ 30 ಸಾವಿರ ಜನ ಸೇರಿಸಿ ಹೋರಾಟ ಮಾಡುತ್ತೇವೆ. ಜನಶಕ್ತಿ ವ್ಯರ್ಥ ಮಾಡಲು ಬಿಡಲು ಸಾಧ್ಯವಿಲ್ಲ. ಈ ಜನ ಶಕ್ತಿಯೇ 2023ರ ಚುನಾವಣೆಯಲ್ಲಿ ಗಂಭೀರವಾದ ಪರಿಣಾಮ ಬೀರಲಿದೆ ಎಂದು ಎಚ್ಚರಿಕೆ ನೀಡಿದರು.

Related Stories

No stories found.

Advertisement

X
Kannada Prabha
www.kannadaprabha.com