ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ನೇಮಕ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಮಂಡ್ಯದ ಬಿಜೆಪಿ ಮುಖಂಡ ಕೆ. ನಾಗಣ್ಣಗೌಡ ಅವರನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಹೊರಡಿಸಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಮಂಡ್ಯದ ಬಿಜೆಪಿ ಮುಖಂಡ ಕೆ. ನಾಗಣ್ಣಗೌಡ ಅವರನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಹೊರಡಿಸಿದೆ.

ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆ ಆಯೋಗದ ನಿಬಂಧನೆಗಳ ವಿರುದ್ಧವಾಗಿ ನಾಗಣ್ಣಗೌಡ ಅವರನ್ನು ನೇಮಿಸಿ ಸರ್ಕಾರ ಅಕ್ಟೋಬರ್ 21, 2022 ರಂದು ಹೊರಡಿಸಿರುವ ಆದೇಶಕ್ಕೆ ತಡೆ ನೀಡಬೇಕೆಂದು ಅರ್ಜಿ ಸಲ್ಲಿಸಿರುವ ದೂರುದಾರರಾದ ವಕೀಲೆ ಸುಧಾ ಕತ್ವಾ, ಅರ್ಜಿ ಬಾಕಿಯಿರುವಾಗ  ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸದಂತೆ ನಿರ್ಬಂಧಿಸಬೇಕು ಎಂದು ನ್ಯಾಯಾಲಯವನ್ನು ಒತ್ತಾಯಿಸಿದರು.

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿನಾಗಿ ಅವರಿದ್ದ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ಹೊರಡಿಸಿತು. 

ನಿಗದಿತ ದಿನಾಂಕದ ನಂತರ ಹೆಚ್ಚುವರಿಯಾಗಿ ನಾಲ್ಕು ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 10 ಜನರ ಬದಲಿಗೆ 12 ಜನರ ಕಿರುಪಟ್ಟಿ ರಚಿಸಲಾಗಿದೆ. ಮೂಲತ:ವಾಗಿ ಅರ್ಜಿ ಸಲ್ಲಿಸದಿದ್ದರೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಾಗಣ್ಣಗೌಡ ಅವರನ್ನು ಆಯ್ಕೆ ಮಾಡಿದ್ದು,  ಮೇ 9, 2022 ರಂದು ರಚಿಸಲಾದ ಅರ್ಹ ಅಭ್ಯರ್ಥಿಗಳ ಕಿರುಪಟ್ಟಿಯಲ್ಲಿ ಅವರ ಹೆಸರನ್ನು ಸೇರಿಸಲಾಗಿದೆ. ಇಡೀ ನೇಮಕ ಪ್ರಕ್ರಿಯೆ ಪ್ರಾಮಾಣಿಕವಾಗಿ ನಡೆದಿಲ್ಲ ಎಂದು ದೂರುದಾರರು ಆಕ್ಷೇಪಿಸಿದ್ದಾರೆ. 

ನಾಗಣ್ಣಗೌಡ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದು, ಎನ್ ಜಿಒ ವೊಂದನ್ನು ನಡೆಸುತ್ತಿದ್ದಾರೆ. ಇದರ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಲಾಗಿದೆ. ನಿಯಮಗಳ ಉಲ್ಲಂಘನೆಯಾಗಿರುವುದರಿಂದ ಅವರ ನೇಮಕವನ್ನು ರದ್ದುಗೊಳಿಸುವಂತೆ ದೂರುದಾರರ ಪರ ವಕೀಲರಾದ ಎಸ್ .ಉಮಾಪತಿ ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com