ಹುಬ್ಬಳ್ಳಿ-ಧಾರವಾಡದಲ್ಲಿ ಇದೇ 12 ರಿಂದ ರಾಷ್ಟ್ರೀಯ ಯುವ ಜನೋತ್ಸವ: ಲಾಂಛನ, ಮ್ಯಾಸ್ಕಟ್ ಬಿಡುಗಡೆ
ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಇದೇ 12 ರಿಂದ ಐದು ದಿನ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ.
Published: 07th January 2023 01:23 PM | Last Updated: 07th January 2023 01:23 PM | A+A A-

ಲಾಂಛನ ಮತ್ತು ಮ್ಯಾಸ್ಕಟ್ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಸಚಿವ ಡಾ.ಕೆ. ಸಿ, ನಾರಾಯಣಗೌಡ, ತಾರಾ ಅನುರಾಧ ಮತ್ತಿತರರು
ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಇದೇ 12 ರಿಂದ ಐದು ದಿನ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ.
ಯುವ ಜನೋತ್ಸವದ ಲಾಂಛನ ಮತ್ತು ಮ್ಯಾಸ್ಕಟ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಿಡುಗಡೆಗೊಳಿಸಿದರು. ಯುವ ವ್ಯವಹಾರಗಳ ಸಚಿವ ಡಾ. ಕೆ. ಸಿ, ನಾರಾಯಣಗೌಡ, ನಟಿ ತಾರಾ ಅನುರಾಧ ಮತ್ತಿತರರು ಉಪಸ್ಥಿತರಿದ್ದರು. ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ವರ್ಚುಯಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಮುಖ್ಯಮಂತ್ರಿ @BSBommai ಅವರು ಜನವರಿ ೧೨ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನ ಉತ್ಸವದ ಲೋಗೋ ಮತ್ತು ಮ್ಯಾಸ್ಕಾಟ್ ಅನ್ನು ಇಂದು ಬಿಡುಗಡೆ ಮಾಡಿದರು.
1/2 pic.twitter.com/PrzGJktJ49— CM of Karnataka (@CMofKarnataka) January 7, 2023
ಲಾಂಛನ: ಒಡಿಶಾದ ಬನ್ಸಿಲಾಲ್ ಕೇತ್ಕಿ ರಚಿಸಿದ ಲಾಂಛನವನ್ನು ಉತ್ಸವಕ್ಕೆ ಆಯ್ಕೆ ಮಾಡಲಾಗಿದ್ದು, ಅವರಿಗೆ 50,000 ರೂ. ಬಹುಮಾನ ದೊರೆಯಲಿದೆ. ಈ ಲಾಂಛನ ಭಾರತದ ರಾಷ್ಟ್ರೀಯ ಹೂ ತಾವರೆಯಿಂದ ಪ್ರೇರೇಪಿತವಾಗಿದ್ದು, ರಾಷ್ಟ್ರೀಯತೆ, ನಿಸ್ವಾರ್ಥ ಸೇವೆ ಮತ್ತು ವೈವಿಧ್ಯತೆ ನಡುವೆಯೂ ಏಕತೆ ಹಾಗೂ ಸಹಕಾರವನ್ನು ಪ್ರತಿನಿಧಿಸುತ್ತದೆ.
ಚಂಪಿ ಚಿಕ್ಕ ಮ್ಯಾಸ್ಕಟ್: ಬೆಂಗಳೂರಿನ ಇನ್ಬಂ ರಚಿಸಿದ ಚಂಪಿ ಚಿಕ್ಕ ಮ್ಯಾಸ್ಕಟ್ ಆಯ್ಕೆಯಾಗಿದ್ದು, ಅವರಿಗೂ ರೂ. 50,000 ಬಹುಮಾನ ದೊರೆಯಲಿದೆ. ಇದು ಆನೆಯ ವಿನ್ಯಾಸ ಹೊಂದಿದ್ದು, ಕರ್ನಾಟಕದಲ್ಲಿ ಅತಿ ಹೆಚ್ಚಿರಿವು ಆನೆಗಳ ಸಂಖ್ಯೆಯನ್ನು ಪ್ರತಿನಿಧಿಸುತ್ತದೆ.
ಜಾಗತಿಕ ಮಟ್ಟದಲ್ಲಿ ಹವಾಮಾನ ಬದಲಾವಣೆ. ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ, ವಿಶ್ವ ಶಾಂತಿ ಜೊತೆಗೆ ಕ್ರೀಡೆ, ಸ್ಟಾರ್ಟ್ ಅಪ್, ನಾವಿನ್ಯತೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಯುವ ಮತ್ತು ಆಧುನಿಕ ಭಾರತವನ್ನು ಬಿಂಬಿಸುತ್ತದೆ.