ಸ್ಯಾಂಟ್ರೋ ರವಿ ವಿರುದ್ಧ ತನಿಖೆಗೆ ಸಿಎಂ ಬೊಮ್ಮಾಯಿ ಸೂಚನೆ

ರಾಜ್ಯದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ ಪ್ರಕರಣ ತಾರಕಕ್ಕೇರಿರುವಂತೆಯೇ ಇತ್ತ ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಸ್ಯಾಂಟ್ರೋ ರವಿ ವಿರುದ್ಧ ತನಿಖೆಗೆ ಸೂಚಿಸಿರುವುದಾಗಿ ಹೇಳಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ ಪ್ರಕರಣ ತಾರಕಕ್ಕೇರಿರುವಂತೆಯೇ ಇತ್ತ ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಸ್ಯಾಂಟ್ರೋ ರವಿ ವಿರುದ್ಧ ತನಿಖೆಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

ಪ್ರತಿಪಕ್ಷಗಳ ವ್ಯಾಪಕ ಟೀಕಾ ಪ್ರಹಾರದ ನಡುವೆ ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಸ್ಯಾಂಟ್ರೋ ‌ರವಿ ವಿಚಾರದ ಬಗ್ಗೆ‌ ಮಾತನಾಡಿರುವ ಸಿಎಂ ಬೊಮ್ಮಾಯಿ ಅವರು, ಕ್ರಿಮಿನಲ್ ಹಿನ್ನೆಲೆಯುಳ್ಳ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥನನ್ನು ಬಂಧಿಸಿ ಕಳೆದ 20 ವರ್ಷಗಳಲ್ಲಿ ಆತನ ಮೇಲಿರುವ ಎಲ್ಲ ಕೇಸ್‌ಗಳು ಹಾಗೂ ಆತನಿಗಿರುವ ರಾಜಕಾರಣಿಗಳ ಸಂಪರ್ಕದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ಯಾಂಟ್ರೊ ರವಿ ಯಾರ್‍ಯಾರ ಜತೆ ಫೋಟೊ ತೆಗೆಸಿಕೊಂಡಿದ್ದಾನೆ ಎಂಬ ಆಧಾರದ ಮೇಲೆ ಮಾತನಾಡುವುದು ಸರಿಯಲ್ಲ. ಇಂತಹ ಅಪರಾಧ ಚಟುವಟಿಕೆಯಲ್ಲಿರುವವರು ಫೋಟೊ ತೆಗೆಸಿಕೊಳ್ಳುತ್ತಾರೆ. ಆಡಳಿತ ಪಕ್ಷ ಸಚಿವರ ಜತೆ ಮಾತ್ರವಲ್ಲ, ವಿರೋಧ ಪಕ್ಷದ ನಾಯಕರುಗಳ ಜತೆಯೂ ಸಂಪರ್ಕ ಇದೆ. ಹಾಗಾಗಿ, ಫೋಟೊಗಳ ಆಧಾರದ ಮೇಲೆ ಮಾತನಾಡುವುದನ್ನು ಬಿಟ್ಟು ಆತನ ಕೇಸ್‌ಗಳ ಬಗ್ಗೆ ತನಿಖೆ ಮಾಡಿದರೆ ಎಲ್ಲವೂ ಬಯಲಾಗುತ್ತದೆ ಎಂದರು.

'ಸ್ಯಾಂಟ್ರೊ ರವಿ ಏನೇನು ಮಾಡಿದ್ದಾನೆ, ಯಾವ ಯಾವ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ. ಕಳೆದ 20 ವರ್ಷಗಳಲ್ಲಿ ಯಾರ್‍ಯಾರ ಸಂಪರ್ಕದಲ್ಲಿದ್ದಾನೆ. ಈ ಬಗ್ಗೆ ನಿಖರವಾಗಿ, ಕರಾರುವಕ್ಕಾಗಿ ತನಿಖೆ ಮಾಡಿ ಎಂದು ಪೊಲೀಸರಿಗೆ ಸೂಚಿಸಿದ್ದೇನೆ. ಸ್ಯಾಂಟ್ರೊ ರವಿ ವಿರುದ್ಧ ಇರುವ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಆತನ ವಿರುದ್ಧ ತನಿಖೆ ನಡೆಸಿ ಪುರಾವೆಗಳನ್ನು ಸಂಗ್ರಹಿಸಿ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇವೆ, ಯಾರನ್ನೂ ಬಚಾವ್ ಮಾಡುವ ಪ್ರಶ್ನೆಯೇ ಇಲ್ಲ. ಎಲ್ಲವೂ ಹೊರಗೆ ಬರಲಿ, ಎಲ್ಲರ ಬಣ್ಣ ಬಯಲಾಗುತ್ತದೆ ಎಂದರು.

ಮಹಿಳೆ ನೀಡಿರುವ ದೂರಿನ ದೂರಿನ ಆಧಾರಜ ಮೇಲೆ ಕ್ರಮ
ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಸ್ಯಾಂಟ್ರೋ ರವಿ ಬಂಧಿಸಿ ಕ್ರಮ ತೆಗದುಕೊಳ್ಳಲು ಸೂಚನೆ ನೀಡಿದ್ದೇನೆ. ಯಾವುದೇ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದು ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com